MUKRAM KHAN | ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ಬಂಧನ
ಹಿಜಾಬ್ ತಂಟೆಗೆ ಬಂದರೆ ತುಂಡು ತುಂಡು ಮಾಡ್ತೇವೆ
ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ಬಂಧನ
ಹೈದರಾಬಾದ್ ನಲ್ಲಿ ಕೈ ಮುಖಂಡ ಮುಕ್ರಂ ಖಾನ್ ಬಂಧನ
ಫೆ.16 ರಂದು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ
ಕಲಬುರಗಿ: ಹಿಜಾಬ್ ವಿಚಾರಕ್ಕೆ ಬಂದರೇ ತುಂಡು ತುಂಡು ಮಾಡುತ್ತೇವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ಅವರನ್ನು ಬಂಧಿಸಿದ್ದಾರೆ. ಹೈದರಾಬಾದ್ ನಲ್ಲಿ ಮುಕ್ರಂ ಖಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಹಿಜಾಬ್ ವಿಚಾರವಾಗಿ ಸೇಡಂ ಪಟ್ಟಣದಲ್ಲಿ ಪ್ರತಿಭಟನೆ ನಡೆದಿತ್ತು. ಆಗ ಮುಕ್ರಂ ಖಾನ್ ಅವರು ಹಿಜಾಬ್ ವಿಚಾರಕ್ಕೆ ಬಂದರೇ ತುಂಡು ತುಂಡು ಮಾಡುತ್ತೇವೆ ಎಂದು ಪ್ರಚೋಧನಕಾರಿ ಹೇಳಿಕೆಯನ್ನು ನೀಡಿದ್ದರು.
ಈ ಸಂಬಂಧ ಕಳೆದ ಫೆಬ್ರವರಿ 16 ರಂದು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆ ಅಜ್ಞಾತ ಸ್ಥಳಕ್ಕೆ ತೆರಳಿ ಮುಕ್ರಂ ಖಾನ್ ಜಾಮೀನು ಅರ್ಜಿ ಸಲ್ಲಿಸಿದ್ದರು.
ಆದ್ರೆ ಕಲಬುರಗಿ ಜಿಲ್ಲಾ ನ್ಯಾಯಾಲಯ ಮುಕ್ರಂ ಖಾನ್ ಅವರ ಜಾಮೀನು ಅರ್ಜಿಯನ್ನ ವಜಾಗೊಳಿಸಿತ್ತು.
ಹೀಗಾಗಿ ಹೈದರಾಬಾದ್ ನಲ್ಲಿ ಮುಕ್ರಂಖಾನ್ ಅವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅನಾರೋಗ್ಯ ಹಿನ್ನೆಲೆ ಅವರನ್ನು ಹೈದರಾಬಾದ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.









