ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ಸ್ಥಿತಿ ಗಂಭೀರ
ಮಂಗಳೂರು : ಯೋಗ ಮಾಡುವ ವೇಳೆ ಜಾರಿ ಬಿದ್ದು ಯೆನೆಪೋಯ ಆಸ್ಪತ್ರೆಗೆ ದಾಖಲಾಗಿ ಚಿಕತ್ಸೆ ಪಡೆಯುತ್ತಿರುವ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಯೋಗ ಮಾಡುವ ವೇಳೆ ಜಾರಿ ಬಿದ್ದು ಯೆನೆಪೋಯ ಆಸ್ಪತ್ರೆಗೆ ಆಸ್ಕರ್ ಫರ್ನಾಂಡಿಸ್ ದಾಖಲಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರೆದಿದೆ.
ಇಂದು ಅವರ ಆರೋಗ್ಯ ವಿಚಾರಿಸಲು ಮಾಜಿ ಸಚಿವ ಎಂ.ಬಿ.ಪಾಟೀಲ್ ಮಂಗಳೂರಿನ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಬಳಿಕ ಮಾತನಾಡಿದ ಅವರು, ಆಸ್ಕರ್ ಫರ್ನಾಂಡಿಸ್ ಅವರ ಕೈ ಮತ್ತು ಕಾಲುಗಳಲ್ಲಿ ಚಲನೆಯೊಂದಿಗೆ ಅವರ ಸ್ಥಿತಿಯಲ್ಲಿ ಸ್ವಲ್ಪ ಸುಧಾರಣೆಯಾಗಿದೆ ಎಂದು ಹೇಳಿದರು.
ಉಡುಪಿ ಮತ್ತು ಮಣಿಪಾಲದ ತಜ್ಞ ವೈದ್ಯರ ತಂಡ ಅವರ ಆರೋಗ್ಯ ಸ್ಥಿತಿಯ ಮೇಲೆ ನಿಗಾ ಇಡಲಾಗಿದೆ ಎಂದು ತಿಳಿಸಿದರು.
ಆಸ್ಕರ್ ಫರ್ನಾಂಡಿಸ್ ಅವರಿಗೆ ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಇವತ್ತು ಕಾಂಗ್ರೆಸ್ ನ ಹಿರಿಯ ನಾಯಕ ಜನಾರ್ದನ ಪೂಜಾರಿ ಆಸ್ಪತ್ರೆಗೆ ಭೇಟಿ ನೀಡಿದ್ದರು.