ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅರೆಸ್ಟ್
ಉತ್ತರಪ್ರದೇಶ : ಲಖಿಂಪುರ ಖೇರಿಗೆ ತೆರಳುವಾಗ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಪ್ರಿಯಾಂಕಾ ಗಾಂಧಿ ಅವರನ್ನು ಸೀತಾಪುರದ ಹರಗಾಂವ್ ಬಳಿ ಇಂದು ಮುಂಜಾನೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ರಾಷ್ಟ್ರೀಯ ಯೂಥ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್, ಪ್ರಿಯಾಂಕಾ ಗಾಂಧಿ ಅವರೊಂದಿಗೆ ಪೊಲೀಸರು ಮಾತನಾಡುತ್ತಿರುವ ವಿಡಿಯೋ ಹಂಚಿಕೊಂಡಿದ್ದಾರೆ.
ಅಲ್ಲದೆ ‘ಈ ದೇಶದಲ್ಲಿ ಏನಾಗುತ್ತಿದೆ? ಝಡ್+ ಭದ್ರತೆಯಿರುವ ನಾಯಕಿಯನ್ನು ಯಾವುದೇ ವಾರಂಟ್ ಇಲ್ಲದೇ ಪೊಲೀಸರು ಬಂಧಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.
ಏನಿದು ಲಖಿಂಪುರ್ ಖೇರಿ ಪ್ರಕರಣ..?
ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ಉಪಮುಖ್ಯಮಂತ್ರಿ ಕೇಶವ ಮೌರ್ಯ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಭೇಟಿಗಾಗಿ ರೈತರು ಬೆಳಿಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದರು.
ಈ ವೇಳೆ ರೈತರ ಮೇಲೆ ಸಚಿವರ ಬೆಂಗಾವಲು ವಾಹನ ಹರಿದು ಸಾವಿಗೀಡಾಗಿದ್ದಾರೆ. ಪ್ರಕರಣದಲ್ಲಿ ಒಟ್ಟು ೮ ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಪ್ರದೇಶದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.









