ನವದೆಹಲಿ : ಏಪ್ರಿಲ್ ನಂತರ ದೇಶದಲ್ಲಿ 1.89 ಕೋಟಿ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ ಎಂಬ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಫೇಸ್‍ಬುಕ್‍ನಲ್ಲಿ ದ್ವೇಷ ಮತ್ತು ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ದೇಶದಲ್ಲಿರುವ ನಿರುದ್ಯೋಗ ಸಮಸ್ಯೆಯನ್ನು ಮುಚ್ಚಿಡಲು ಸಾಧ್ಯವಿಲ್ಲ’ ಎಂದು ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್, “ಕಳೆದ ನಾಲ್ಕು ತಿಂಗಳಲ್ಲಿ ದೇಶದಾದ್ಯಂತ 2 ಕೋಟಿ ಮಂದಿ ಉದ್ಯೋಗ ಕಳೆದುಕೊಂಡಿದ್ದು, ಇನ್ನೂ ಎರಡು ಕೋಟಿ ಕುಟುಂಬಗಳ ಭವಿಷ್ಯ ಕತ್ತಲಲ್ಲಿದೆ. ಇಂಥ ಸಂದರ್ಭದಲ್ಲಿ ಸರ್ಕಾರ ದೇಶದಲ್ಲಿರುವ ನಿರುದ್ಯೋಗ ಸಮಸ್ಯೆಯನ್ನು ಫೇಸ್‍ಬುಕ್‍ನಲ್ಲಿ ದ್ವೇಷ ಮತ್ತು ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ಮುಚ್ಚಿಡಲು ಸಾಧ್ಯವಿಲ್ಲ’ ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.
पिछले 4 महीनों में क़रीब 2 करोड़ लोगों ने नौकरियाँ गँवायी हैं। 2 करोड़ परिवारों का भविष्य अंधकार में है।
फेसबुक पर झूठी खबरें और नफ़रत फैलाने से बेरोज़गारी और अर्थव्यवस्था के सर्वनाश का सत्य देश से नहीं छुप सकता। pic.twitter.com/xXagwu5Ytx
— Rahul Gandhi (@RahulGandhi) August 19, 2020









