ADVERTISEMENT
Tuesday, March 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಶಿಡ್ಲಘಟ್ಟ ಪೌರಾಯುಕ್ತೆಗೆ ಅವಾಚ್ಯ ನಿಂದನೆ: ಬಂಧನ ಭೀತಿಯಿಂದ ತಲೆಮರೆಸಿಕೊಂಡ ಕಾಂಗ್ರೆಸ್ ನಾಯಕ ರಾಜೀವ್ ಗೌಡ

Congress leader Rajiv Gowda goes into hiding for fear of arrest after verbally abusing a female officer

Shwetha by Shwetha
January 16, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಚಿಕ್ಕಬಳ್ಳಾಪುರ: ಅಧಿಕಾರ ಮತ್ತು ಪ್ರಭಾವದ ಮದದಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಯ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ದರ್ಪ ತೋರಿದ್ದ ಶಿಡ್ಲಘಟ್ಟದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಇದೀಗ ಕಾನೂನಿನ ಕುಣಿಕೆ ಬಿಗಿಯಾಗಿದೆ. ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತ ಗೌಡ ಅವರ ಮೇಲೆ ಅಶ್ಲೀಲ ಪದಪ್ರಯೋಗ ಮಾಡಿ ಬೆದರಿಕೆ ಹಾಕಿದ ಪ್ರಕರಣವು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಆರೋಪಿಯ ವಿರುದ್ಧ ಎರಡೆರಡು ಎಫ್‌ಐಆರ್ ದಾಖಲಾಗುವುದರೊಂದಿಗೆ ಬಂಧನದ ಭೀತಿ ಎದುರಾಗಿದೆ.

ಎರಡೆರಡು ಸಂಕಷ್ಟ, ಜೋಡಿ ಎಫ್‌ಐಆರ್ ದಾಖಲು

Related posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

March 3, 2026
ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

March 3, 2026

ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ. ಒಂದೆಡೆ ಕರ್ತವ್ಯನಿರತ ಮಹಿಳಾ ಅಧಿಕಾರಿಗೆ ಅಶ್ಲೀಲವಾಗಿ ನಿಂದಿಸಿದ ಆರೋಪದ ಮೇಲೆ ಪೌರಾಯುಕ್ತೆ ಅಮೃತ ಗೌಡ ಅವರು ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ. ಮತ್ತೊಂದೆಡೆ, ಸ್ಥಳೀಯ ಶಾಸಕರಾದ ಜೆಡಿಎಸ್‌ನ ಬಿ.ಎಂ. ರವಿಕುಮಾರ್ ಅವರ ವಿರುದ್ಧವೂ ರಾಜೀವ್ ಗೌಡ ಕೀಳುಮಟ್ಟದ ಪದಗಳನ್ನು ಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಮುಖಂಡರು ದೂರು ನೀಡಿದ್ದಾರೆ. ಈ ಎರಡೂ ದೂರುಗಳನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಪ್ರತ್ಯೇಕವಾಗಿ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.

ಘಟನೆಯ ಹಿನ್ನೆಲೆ ಏನು?

ಶಿಡ್ಲಘಟ್ಟ ನಗರದ ಪ್ರಮುಖ ಜಾಗವಾದ ಕೋಟೆ ವೃತ್ತದಲ್ಲಿ ರಸ್ತೆಗೆ ಅಡ್ಡಲಾಗಿ ಹಾಕಲಾಗಿದ್ದ ಬ್ಯಾನರ್ ಒಂದನ್ನು ನಗರಸಭೆ ಸಿಬ್ಬಂದಿ ತೆರವುಗೊಳಿಸಿದ್ದರು. ನಿಯಮದಂತೆ ಕರ್ತವ್ಯ ನಿರ್ವಹಿಸಿದ ಪೌರಾಯುಕ್ತೆ ಅಮೃತ ಗೌಡ ಅವರಿಗೆ ಕರೆ ಮಾಡಿದ ರಾಜೀವ್ ಗೌಡ, ಅತ್ಯಂತ ಅಸಭ್ಯವಾಗಿ ವರ್ತಿಸಿದ್ದರು. ಏಕವಚನದಲ್ಲಿ ನಿಂದಿಸಿದ್ದಲ್ಲದೇ, ಅಶ್ಲೀಲ ಪದಗಳನ್ನು ಬಳಸಿ ಅಧಿಕಾರಿಯ ಮಾನಹಾನಿ ಮಾಡಲು ಯತ್ನಿಸಿದ್ದರು. ಈ ಆಡಿಯೋ ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ರಾಜೀವ್ ಗೌಡ ದರ್ಬಾರ್ ಗೆ‌ ಬೇಸತ್ತಿದ್ದ ಅಧಿಕಾರಿಗಳು

ಅವರು ಶಿಡ್ಲಘಟ್ಟ ಕ್ಷೇತ್ರದಲ್ಲಿ ಯಾವುದೇ ಸಾಂವಿಧಾನಿಕ ಹುದ್ದೆಯಲ್ಲಿಲ್ಲದಿದ್ದರೂ, ಶಾಸಕರಂತೆ ವರ್ತಿಸುತ್ತಿದ್ದರು ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಕ್ಷೇತ್ರದಲ್ಲಿ ಜೆಡಿಎಸ್ ಶಾಸಕರಿದ್ದರೂ, ತಾವೇ ಅಧಿಕಾರ ಚಲಾಯಿಸಲು ಯತ್ನಿಸುತ್ತಿದ್ದರು. ತಾಲೂಕಿಗೆ ಬರುವ ಪ್ರತಿಯೊಬ್ಬ ಸರ್ಕಾರಿ ಅಧಿಕಾರಿಯು ತಮ್ಮ ಅಣತಿಯಂತೆ ನಡೆಯಬೇಕು, ವಿವಿಧ ಇಲಾಖೆಗಳಲ್ಲಿ ತಮ್ಮ ಮಾತೇ ಅಂತಿಮವಾಗಬೇಕು ಎಂದು ಒತ್ತಡ ಹೇರುತ್ತಿದ್ದರು ಎನ್ನಲಾಗಿದೆ. ಈ “ಪರೋಕ್ಷ ದರ್ಬಾರ್” ವರ್ತನೆಯಿಂದ ಬೇಸತ್ತಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಇದೀಗ ರಾಜೀವ್ ಗೌಡ ವಿರುದ್ಧ ತಿರುಗಿಬಿದ್ದಿದ್ದಾರೆ.

ತಲೆಮರೆಸಿಕೊಂಡ ಆರೋಪಿ, ಪೊಲೀಸರಿಂದ ಶೋಧ

ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ರಾಜೀವ್ ಗೌಡ, ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ. ತಮ್ಮ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಪೊಲೀಸರಿಗೆ ಸಿಗದೆ ಕಣ್ಣಾಮುಚ್ಚಾಲೆ ಆಡುತ್ತಿದ್ದಾರೆ. ಆರೋಪಿಯ ಪತ್ತೆಗೆ ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದು, ತೀವ್ರ ಶೋಧಕಾರ್ಯ ನಡೆಸುತ್ತಿದ್ದಾರೆ.

ಈ ಘಟನೆಯು ಸರ್ಕಾರಕ್ಕೂ ಮುಜುಗರ ತಂದೊಡ್ಡಿದ್ದು, ಸ್ವತಃ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ತಪ್ಪು ಯಾರೇ ಮಾಡಿದ್ದರೂ ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇತ್ತ ಶಿಡ್ಲಘಟ್ಟದಲ್ಲಿ ನಗರಸಭೆ ನೌಕರರು, ವಿವಿಧ ಸಂಘಟನೆಗಳು ಹಾಗೂ ವಿರೋಧ ಪಕ್ಷದ ಮುಖಂಡರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಮಹಿಳಾ ಅಧಿಕಾರಿಗೆ ರಕ್ಷಣೆ ಇಲ್ಲದಂತಾಗಿದೆ, ಕೂಡಲೇ ಆರೋಪಿಯನ್ನು ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ. ಒಟ್ಟಾರೆಯಾಗಿ, ಒಂದು ಬ್ಯಾನರ್ ವಿಚಾರವಾಗಿ ಆರಂಭವಾದ ವಿವಾದವು ಇದೀಗ ಕಾಂಗ್ರೆಸ್ ಮುಖಂಡನಿಗೆ ತಿರುಗುಬಾಣವಾಗಿದ್ದು, ರಾಜಕೀಯ ಮತ್ತು ಕಾನೂನು ಹೋರಾಟದ ಸ್ವರೂಪ ಪಡೆದುಕೊಂಡಿದೆ.

ShareTweetSendShare
Join us on:

Related Posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

by Shwetha
March 3, 2026
0

2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್–ಬಿಜೆಪಿ ಮೈತ್ರಿ ವಿಚಾರವಾಗಿ ರಾಜಕೀಯ ಸಂದೇಶಗಳು ಹೊರಬರುತ್ತಿರುವ ಹಿನ್ನೆಲೆ, ಬಿಜೆಪಿಯ ಜಿಲ್ಲಾ ಘಟಕದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲ ಹೆಚ್ಚಾಗಿದೆ...

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

by Shwetha
March 3, 2026
0

ರಾಜ್ಯ ರಾಜಕೀಯದಲ್ಲಿ ಬದಲಾದ ಸಮೀಕರಣಗಳ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಮ್ಮ ರಾಜಕೀಯ ಬಲವನ್ನು ಸಂಘಟಿಸಲು ಮುಂದಾಗಿರುವಂತೆ ಕಾಣುತ್ತಿದೆ. ತಮ್ಮ ತಂದೆ ಮತ್ತು ಹಿರಿಯ...

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

by Shwetha
March 3, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ಭಾರೀ ತಲ್ಲಣಕ್ಕೊಳಗಾಗಿದೆ. ಯುದ್ಧ ಭೀತಿ ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದ್ದು, ಮಾರುಕಟ್ಟೆಯಲ್ಲಿ ಮಾರಾಟದ...

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

by Shwetha
March 3, 2026
0

ಬೆಂಗಳೂರು: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜೈನ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಗೆ ಕರ್ನಾಟಕ ಹೈಕೋರ್ಟ್ ಭಾರಿ ಆಘಾತ ನೀಡಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ...

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

by Shwetha
March 3, 2026
0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಮಾತುಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ವಿಧಾನಸೌಧದ ಪಡಸಾಲೆಯಲ್ಲಿ ಕೇಳಿಬರುತ್ತಿದ್ದ ಮಂತ್ರಿಗಿರಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram