ಕಾಂಗ್ರೆಸ್ ಮುಖಂಡ ಎಸ್.ಎಂ.ಆನಂದ್ ನಿಧನ SM Anand saaksha tv
ಹಾಸನ : ವಿಧಾನ ಪರಿಷತ್ ನ ಕಾಂಗ್ರೆಸ್ ಮಾಜಿ ಸದಸ್ಯ ಎಸ್ ಎಂ ಆನಂದ್ ಅವರು ವಿಧಿವಶರಾಗಿದ್ದಾರೆ.
ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಆಸ್ಟರ್ ಆರ್ ವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ವೃತ್ತಿಯಲ್ಲಿ ವಕೀಲರಾಗಿದ್ದ ಅವರು ಮೂರು ದಶಕಗಳ ಹಿಂದೆ ಕಾಂಗ್ರೆಸ್ ಸೇರಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು.
2004-2010 ರ ವರೆಗೆ ವಿಧಾನ ಪರಿಷತ್ ಸದಸ್ಯರಾಗಿದ್ದರು. 1996ರಲ್ಲಿ ಹಾಸನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು.
ಹಾಸನ ನಗರಾಭಿವೃದ್ಧಿ ಪ್ರಾಧಿಕಾರ, ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷರಾಗಿ ಮತ್ತು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷಾಗಿಯೂ ಸೇವೆ ಸಲ್ಲಿಸಿದ್ದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿದ್ದರು.
ಇಂದು ಸಂಜೆ ಬಿಟ್ಟಗೌಡನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.