ಕಾಂಗ್ರೆಸ್ ನ ರಾಷ್ಟ್ರೀಯ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವರದಿಗಳಂತೆ, ಸೋನಿಯಾ ಗಾಂಧಿ ಅವರು ತೀವ್ರ ಜ್ವರದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಅವರ ಮೇಲೆ ನಿಗಾವಹಿಸಲಾಗಿದೆ ಎನ್ನಲಾಗಿದೆ. ಸೋನಿಯಾ ಗಾಂದಿ ಅವರು ಈ ವರ್ಷದಲ್ಲಿ 3ನೇ ಬಾರಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಜನೇವರಿ ತಿಂಗಳಲ್ಲಿ ವೈರಲ್ ಉಸಿರಾಟದ ತೊಂದರೆಯಾಗಿದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಸದ್ಯ ಜ್ವರದಿಂದಾಗಿ ದಾಖಲಾಗಿದ್ದಾರೆ.
ಮಾರ್ಚ್ 2ರಂದು ಕೂಡ ಅವರು ಜ್ವರದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು.