ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಲ್ಲದೇ, ಸೋನಿಯಾ ಗಾಂಧಿ ಅವರೊಂದಿಗೆ ಬಿಜೆಪಿ ನಾಯಕ ಚುನ್ನಿಲಾಲ್ ಗರಾಸಿಯಾ ಮತ್ತು ಮದನ್ ರಾಥೋಡ್ ಕೂಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಮಹಾವೀರ್ ಪ್ರಸಾದ್ ಶರ್ಮಾ ಹೇಳಿದ್ದಾರೆ.
ಮಂಗಳವಾರ ನಾಪತ್ರ ಪಡೆಯಲು ಕೊನೆಯ ದಿನವಾಗಿತ್ತು. ಆದರೆ, ಕಣದಲ್ಲಿ ಯಾರೂ ಇಲ್ಲದ ಹಿನ್ನೆಲೆಯಲ್ಲಿ ಮೂವರು ನಾಯಕರು ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ರಾಜ್ಯಸಭಾ ಸದಸ್ಯರಾದ ಮನಮೋಹನ್ ಸಿಂಗ್ (ಕಾಂಗ್ರೆಸ್) ಮತ್ತು ಭೂಪೇಂದ್ರ ಯಾದವ್ (ಬಿಜೆಪಿ) ಅವರ ಅವಧಿ ಏಪ್ರಿಲ್ 3 ರಂದು ಮುಕ್ತಾಯಗೊಳ್ಳಲಿದೆ. ಬಿಜೆಪಿ ಸಂಸದ ಕಿರೋಡಿ ಲಾಲ್ ಮೀನಾ ಅವರು ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸಿದ್ದರು.