ಬಳ್ಳಾರಿ: ಗ್ಯಾರಂಟಿ ಯೋಜನೆಗಳಿಗೆ (Congress Guarantee) ಕಾಂಗ್ರೆಸ್ ನಾಯಕರಿಂದಲೇ ಆಕ್ರೋಶ ವ್ಯಕ್ತವಾಗುತ್ತಿದೆ. ಗ್ಯಾರಂಟಿಗಳಿಂದಾಗಿ ಕ್ಷೇತ್ರಗಳಿಗೆ ಅನುದಾನ ಬರುತ್ತಿಲ್ಲ. ಹೀಗಾಗಿ ಎರಡು ಗ್ಯಾರಂಟಿ ಕೈ ಬಿಡಬೇಕೆಂದು ‘ಕೈ’ ಶಾಸಕ ಆರ್. ಗವಿಯಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎರಡು ಗ್ಯಾರಂಟಿಗಳನ್ನು ರದ್ದು ಮಾಡುವುದರಿಂದ ಅನುದಾನ ಸರಿಯಾಗುತ್ತದೆ. ಗ್ಯಾರಂಟಿಗಳಿಂದ ಆಶ್ರಯ ಮನೆಗಳು ಬರುತಿಲ್ಲ. ಬಸ್ನಲ್ಲಿ ಓಡಾಡೋದು ಸೇರಿದಂತೆ ಇನ್ನಿರಡು ಗ್ಯಾರಂಟಿಗಳು ಕಡಿಮೆ ಮಾಡಲು ಸಿಎಂಗೆ ಹೇಳುತ್ತೇವೆ ಎಂದು ಹೇಳಿದ್ದಾರೆ.
ಈ ಹೇಳಿಕೆಯಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನವಿಲ್ಲ ಎಂದು ಆರೋಪ ಮಾಡುತ್ತಿದ್ದ ವಿರೋಧ ಪಕ್ಷಗಳಿಗೆ ಇದು ಮತ್ತೆ ಸಿಹಿ ತುಪ್ಪ ನೀಡಿದಂತಾಗಿದೆ.