ಬೆಂಗಳೂರು : ದೇವರು ಮೆಚ್ಚುವಂತಹ ಕೆಲಸ ಮಾಡಿದ್ದೆವೆ ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕರಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಟಾಂಗ್ ಕೊಟ್ಟಿದ್ದಾರೆ. ಮಾಜಿ ಪ್ರಧಾನಿ ದಿವಂಗತ ಪಂಡಿತ್ ಜವಾಹರ್ ಲಾಲ್ ನೆಹರು ಅವರ 56ನೇ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ನೆಹರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಕೊರೊನಾ ಸಂಕಷ್ಟ ಸಂದರ್ಭದಲ್ಲಿ ವಿವಿಧ ವರ್ಗಗಳಿಗೆ ರಾಜ್ಯ ಸರ್ಕಾರ ಸಾಧ್ಯವಾದಷ್ಟು ಪರಿಹಾರ ನೀಡಿದೆ. ಇನ್ಯಾವುದೇ ಘೋಷಣೆಗಳನ್ನು ರಾಜ್ಯ ಸರ್ಕಾರ ಮಾಡುವುದಿಲ್ಲ.
ಈಗಾಗಲೇ ಘೋಷಣೆ ಮಾಡಿರುವ ಪರಿಹಾರ ನಿಧಿ ಹಂತದ ಹಂತವಾಗಿ ತಲುಪುತ್ತದೆ. ನಾವು ನಮ್ಮ ಶಕ್ತಿ ಕೆಲಸ ಮಾಡಿದ್ದೇವೆ. ದೇವರು ಮೆಚ್ಚುವಂತ ಕೆಲಸ ಮಾಡಿದ್ದೇವೆ ಎಂದು ಹೇಳಿದ್ದಾರೆ. ಆ ಮೂಲಕ ಘೋಷಣೆ ಮಾಡಿರುವ ಪರಿಹಾರ ನಿಧಿ ಇನ್ನೂ ಫಲಾನುಭವಿಗಳಿಗೆ ಸೇರಿಲ್ಲ ಎಂದು ಆರೋಪ ಮಾಡುತ್ತಿದ್ದ ಕಾಂಗ್ರೆಸ್ ನಾಯಕರಿಗೆ ಬಿ.ಎಸ್. ಯಡಿಯೂರಪ್ಪ ಉತ್ತರ ನೀಡಿದ್ದಾರೆ. ಮಾಜಿ ಪ್ರಧಾನಿ ದಿವಂಗತ ಪಂಡಿತ್ ಜವಾಹರ್ ಲಾಲ್ ನೆಹರು ಅವರ 56ನೇ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ನೆಹರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್ ಉಪಸ್ಥಿತರಿದ್ದರು.








