ಹುಬ್ಬಳ್ಳಿ: ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷ ಸಂಘಟನೆಗೆ ಮುಂದಾಗಿರುವ ಕೈ ನಾಯಕರು, ರಾಜ್ಯ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಜತೆ ಮಹತ್ವದ ಸಭೆ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸಭೆ ಸೇರಿರುವ ಕಾಂಗ್ರೆಸ್ ನಾಯಕರು, ರಣದೀಪ್ ಸಿಂಗ್ ಸುರ್ಜೇವಾಲ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.
ರಾಷ್ಟ್ರ ಹಾಗೂ ರಾಜ್ಯದ ನಾನಾ ಜ್ವಲಂತ ಸಮಸ್ಯೆಗಳು, ಪಕ್ಷ ಸಂಘಟನೆ, ಬಲವರ್ಧನೆ, ಹೋರಾಟದ ಹಾದಿ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.
ವಿಡಿಯೋ ಸಂವಾದದಲ್ಲಿ ಹುಬ್ಬಳ್ಳಿಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಅವರು ಪಾಲ್ಗೊಂಡರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಾಸಕರಾದ ಶಿವಾನಂದ ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಮಹಂತೇಶ್ ಕೌಜಲಗಿ, ಪ್ರಸಾದ್ ಅಬ್ಬಯ್ಯ ಕುಸುಮಾ ಶಿವಳ್ಳಿ, ಎಂಎಲ್ಸಿಗಳಾದ ಬಿ.ಕೆ. ಹರಿಪ್ರಸಾದ್, ಶ್ರೀನಿವಾಸ್ ಮಾನೆ, ಪ್ರಕಾಶ್ ರಾಥೋಡ್, ಮಾಜಿ ವಿಧಾನಸಭಾಧ್ಯಕ್ಷ ಕೆ.ಬಿ. ಕೋಳಿವಾಡ, ಮಾಜಿ ಸಂಸದ ಚಂದ್ರಪ್ಪ, ಕೆಪಿಸಿಸಿ ಮಾಧ್ಯಮ ವಿಭಾಗದ ಉಪ ಮುಖ್ಯಸ್ಥ ವಿ.ಆರ್. ಸುದರ್ಶನ್ ಮತ್ತಿತರ ಮುಖಂಡರು ಉಪಸ್ಥಿತದ್ದರು.
ಸಿಡಬ್ಲೂಸಿ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ, ಮಾರ್ಗರೇಟ್ ಆಳ್ವ, ರೆಹಮಾನ್ ಖಾನ್ ಮತ್ತಿತರ ಹಿರಿಯ ಮುಖಂಡರು ತಮ್ಮ ಸ್ಥಳಗಳಿಂದಲೇ ವಿಡಿಯೋ ಕಾನ್ಫರೆನ್ಸ್ ಸಂವಾದದಲ್ಲಿ ಭಾಗವಹಿಸಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel







