ನವದೆಹಲಿ : ಕೃಷಿ ಮಸೂದೆಯನ್ನು ವಿರೋಧಿಸಿ ಇಂದು ಪ್ರತಿಪಕ್ಷಗಳು ದೆಹಲಿಯ ಸಂಸತ್ ಭವನದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದವು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಮೋದಿ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಜಾರಿಗೆ ತಂದಿದೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತರು, ಕೂಲಿ ಕಾರ್ಮಿಕರು, ಬಡವರ ಪರವಿಲ್ಲ.
ಇದೊಂದು ಕಾರ್ಪೋರೇಟ್ ಕಂಪನಿಗಳ ಸರ್ಕಾರ. ಮೋದಿ ದೇಶದಲ್ಲಿ ಸರ್ವಾಧಿಕಾರಿಯಂತೆ ಆಡಳಿತ ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರ ಜಾರಿ ತರಲು ಹೊರಟಿರುವ ಮಸೂದೆಗಳಿಂದ ರೈತರಿಗೆ ಲಾಭವಿಲ್ಲ.
ಕಾರ್ಪೋರೇಟ್ ಕಂಪನಿಗಳ ಪರವಾಗಿ ಕಾನೂನು ತಂದಿದ್ದಾರೆ. ಹೊಸ ಸುದ್ದಿಗಳನ್ನು ಇಲ್ಲಿ ಓದಿ
ನಾವು ರೈತರ ಪರವಾಗಿ ನ್ಯಾಯಯುತ ಬೇಡಿಕೆ ಇಟ್ಟಿದ್ದು, ನ್ಯಾಯ ಕೇಳಿದ ಸಂಸದರನ್ನು ಅಮಾನತು ಮಾಡಲಾಗಿದೆ.
ರೈತರ ಪರವಾಗಿ ನ್ಯಾಯಯುತವಾಗಿ ಹೋರಾಟ ಮಾಡಿದ್ದೇವೆ, ಹೋರಾಟ ಮಾಡಿದವರನ್ನು ಅಮಾನತ್ತುಗೊಳಿಸಿದ್ದು ಇತಿಹಾಸದಲ್ಲೇ ಇದು ಮೊದಲು.
ಪ್ರಶ್ನೆ ಕೇಳಿದ ಸಂಸದರನ್ನು ಸದನದಿಂದ ಹೊರ ಹಾಕಲಾಗಿದೆ. ರೈತರು ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ.
ಈಗಾಗಲೇ ಪ್ರತಿಭಟನೆ ಮೂಲಕ ಎಚ್ಚರಿಸಿದ್ದು, ಕೇಂದ್ರ ಸರ್ಕಾರ ಈಗಾಲಾದರೂ ರೈತ ವಿರೋಧಿ ಮಸೂದೆ ವಾಪಸ್ ಪಡೆಯಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದರು.








