ಉಪಚುನಾವಣೆ : ಕಾಂಗ್ರೆಸ್ ಪಾಳಯದಲ್ಲಿ ಬಿರುಸಿನ ಚಟುವಟಿಕೆ
1 min read
ಉಪಚುನಾವಣೆ : ಕಾಂಗ್ರೆಸ್ ( congress ) ಪಾಳಯದಲ್ಲಿ ಬಿರುಸಿನ ಚಟುವಟಿಕೆ
ಬೆಂಗಳೂರು : ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ ಬೆನ್ನಲ್ಲೆ ರಾಜ್ಯ ಕಾಂಗ್ರೆಸ್ ನಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾಗಿವೆ.
ನಗರದ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.
ಸಭೆಯಲ್ಲಿ ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಉಪಚುನಾವಣೆಗಳಿಗೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಚರ್ಚೆ ನಡೆಸಿದ್ದಾರೆ.
ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಆರ್.ವಿ.ದೇಶಪಾಂಡೆ, ಎಸ್.ಆರ್ ಪಾಟೀಲ್, ಸತೀಶ್ ಜಾರಕಿಹೊಳಿ, ಚೆಲುವರಾಯಸ್ವಾಮಿ, ಸಲೀಂ ಅಹ್ಮದ್, ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಿದ್ದಾರೆ.
