Congress MLA Nanje Gowda | ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ
ಕೋಲಾರ : ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದು ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ ವಿಶ್ವಾಸ ವ್ಯಕ್ತಪಡಿಸಿದ್ಧಾರೆ.
ಮಾಲೂರಿನ ಚನ್ನಕಲ್ ಗ್ರಾಮದಲ್ಲಿ ಬಿಜೆಪಿ, ಜೆಡಿಎಸ್ ತೊರೆದು ನೂರಾರು ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಂಡರು.
ಈ ಕಾರ್ಯಕ್ರಮದಲ್ಲಿ ಮಾತನಾಡಿದ ನಂಜೇಗೌಡ, ರಾಜ್ಯದಲ್ಲಿರೋದು ಲೂಟಿ ಸರ್ಕಾರ ಎಂದು ಕಿಡಿಕಾರಿದ್ರು.

ಹಾಗೇ 40% ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ ಅಂತಾ ಪ್ರಧಾನಿಗೆ ಪತ್ರ ಬರೆದಿರೊದು ಯಾರು..? ಎಂದು ಪ್ರಶ್ನಿಸಿದರು.
ಪಿಎಸ್ಐ ಹಗರಣದಲ್ಲಿ 500 ಕೋಟಿ ನುಂಗಿ ನೀರು ಕುಡಿದಿದ್ದಾರೆ. ಐಪಿಎಸ್, ಐಎಎಸ್ ಅಧಿಕಾರಿ ಜೈಲಿಗೆ ಹೋಗಿದ್ದಾರೆ.
ಕರ್ನಾಟಕದ ಇತಿಹಾಸದಲ್ಲಿ ಇದೆಲ್ಲಾ ಇತ್ತಾ ಎಂದು ಪ್ರಶ್ನಿಸಿದರು. ಬಿಜೆಪಿ ಸರ್ಕಾರ, ಭ್ರಷ್ಟ ಅಧಿಕಾರಿಗಳನ್ನ ತಂದು ಜನಸಾಮಾನ್ಯರ ಪ್ರಾಣ ಹಿಂಡುತ್ತಿದೆ.
ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯದ ಜನ ತಿರುಗಿ ಬಿದ್ದಿದ್ದಾರೆ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.