ಬೆಂಗಳೂರು : ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಕೈ ನಾಯಕರು ಹೋರಾಟ ಮಾಡಲು ಸಜ್ಜಾಗಿದ್ದಾರೆ. ನಿನ್ನೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೋರಾಟ ನಡೆಸುವಾಗ ಬಗ್ಗೆ ಚರ್ಚೆ ನಡೆದಿದೆ. ಎಪಿಎಂಸಿ ಕಾಯಿದೆಗೆ ತಿದ್ದುಪಡಿ, ಗ್ರಾಮ ಪಂಚಾಯಿತಿಗಳಿಗೆ ನಾಮನಿರ್ದೇಶನ, ಕಾರ್ಮಿಕ ಕಾಯಿದೆಗೆ ತಿದ್ದುಪಡಿ ಸೇರಿದಂತೆ ರಾಜ್ಯ ಸರ್ಕಾರದ ನಿರ್ಧಾರಗಳನ್ನು ಖಂಡಿಸಿ ಇಂದು ಕಾಂಗ್ರೆಸ್ ಶಾಸಕರು ಪ್ರತಿಭಟನೆ ಮಾಡಲಿದ್ದಾರೆ.
ವಿಧಾನಸೌಧ, ವಿಕಾಸಸೌಧ ಮಧ್ಯೆ ಇರುವ ಗಾಂಧಿ ಪ್ರತಿಮೆ ಮುಂಭಾಗ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಯಲಿದೆ. ಇದಾದ ಬಳಿಕ ಮುಂದಿನ ದಿನಗಳಲ್ಲಿ ರಾಜ್ಯ ಚುನಾವಣಾ ಆಯುಕ್ತರು, ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.








