ಕಾಂಗ್ರೆಸ್ ಪಕ್ಷಕ್ಕೆ ಸಿ.ಎಂ. ಇಬ್ರಾಹಿಂ ಗುಡ್ ಬೈ..!?
ಪರಿಷತ್ ವಿಪಕ್ಷ ನಾಯಕ ಸ್ಥಾನ ತಪ್ಪಿದ್ದಕ್ಕೆ ಮುನಿಸು
ಕೈ ಬಿಡುವ ಸೂಚನೆ ಕೊಟ್ಟ MLC ಸಿ.ಎಂ.ಇಬ್ರಾಹಿಂ
ವಿಧಾನ ಪರಿಷತ್ ಸ್ಥಾನಕ್ಕೆ ಶೀಘ್ರದಲ್ಲೇ ರಾಜೀನಾಮೆ
ದೇವೇಗೌಡರ ಜೊತೆ ಮಾತನಾಡಿ ಮುಂದಿನ ನಿರ್ಧಾರ Congress MLC CM Ibrahim Goodbye to Congress saakshatv
ಬೆಂಗಳೂರು : ಕಾಂಗ್ರೆಸ್ ಪಕ್ಷದಿಂದ ಈಗಾಗಲೇ ಒಂದು ಹೆಜ್ಜೆಯನ್ನು ಹೊರಟ್ಟಿರುವ ಕಾಂಗ್ರೆಸ್ ನಾಯಕ ಸಿ.ಎಂ ಇಬ್ರಾಹಿಂ, ಇನ್ನೇನು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಗೆ ಗೈಡ್ ಬೈ ಹೇಳಲಿದ್ದಾರೆ.
ಹೌದು..! ಸಿ.ಎಂ. ಇಬ್ರಾಹಿಂ ವಿಧಾನ ಪರಿಷತ್ ವಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದ್ರೆ ಕೆಪಿಸಿಸಿ ಬಿ.ಕೆ.ಹರಿ ಪ್ರಸಾದ್ ಅವರನ್ನು ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ನೇಮಕ ಮಾಡಿದೆ. ಇದರಿಂದ ಬೇಸರಗೊಂಡಿರುವ ಕಾಂಗ್ರೆಸ್ ಹಿರಿಯ ಎಂಎಲ್ಸಿ ಸಿ.ಎಂ ಇಬ್ರಾಹಿಂ ಪಕ್ಷ ತೊರೆಯಲು ನಿರ್ಧರಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ವಿಧಾನ ಪರಿಷತ್ ಸ್ಥಾನಕ್ಕೆ ಶೀಘ್ರದಲ್ಲೇ ರಾಜೀನಾಮೆ ನೀಡುತ್ತೇನೆ. ಹೆಚ್ ಡಿ ದೇವೇಗೌಡರನ್ನು ಕೇಳಿ ಮುಂದೆ ತೀರ್ಮಾನ ಮಾಡುತ್ತೇನೆ. ನನಗೆ ಸ್ಥಾನ ತಪ್ಪಿಸಿದ ಬಗ್ಗೆ ಸಿದ್ದರಾಮಯ್ಯ ಉತ್ತರಿಸಬೇಕು. ಡಿ.ಕೆ. ಶಿವಕುಮಾರ್ಗೂ ನಮಗೂ ಹೊಂದಾಣಿಕೆಯಾಗಲ್ಲ ಎಂದು ಒತ್ತಾಯಿಸಿದ್ದಾರೆ.
ಸಿದ್ದರಾಮಯ್ಯಗೂ ನನಗೆ ಚೆನ್ನಾಗಿತ್ತು. ದೆಹಲಿಯಿಂದ ನನಗೆ ಹಲವು ಕರೆಗಳು ಬಂದಿವೆ. ಎಲ್ಲ ಮಾಹಿತಿ ನನ್ನ ಬಳಿ ಇಟ್ಟುಕೊಂಡಿದ್ದೇನೆ ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದರು.
ಇನ್ನು ಸಿದ್ದರಾಮಯ್ಯ ಅವರಿಗಾಗಿ ನಾವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಬಿಟ್ಟಿದ್ದೆವು. ಜೈಲಿನಲ್ಲಿದ್ದು ಕಟ್ಟಿದ್ದ ಪಕ್ಷ ಜೆಡಿಎಸ್ ಬಿಟ್ಟಿದ್ದೆವು ಎಂದು ತಿಳಿಸಿದ ಇಬ್ರಾಹಿಂ, ಸಿದ್ದರಾಮಯ್ಯ ಹೊಸ ಉಡುಗೊರೆ ನೀಡಿದ್ದಾರೆ. ಅವರು ಕೊಟ್ಟ ಉಡುಗೊರೆ ಖುಷಿಯಿಂದ ಸ್ವೀಕರಿಸುವೆ ಎಂದು ಬೇಸರ ಹೊರಹಾಕಿದರು.
ಸದ್ಯ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿರುವ ಸುದ್ದಿಯ ಪ್ರಕಾರ ಸಿ.ಎಂ. ಇಬ್ರಾಹಿಂ, ಶೀಘ್ರದಲ್ಲಿಯೇ ಜೆಡಿಎಸ್ ಪಕ್ಷವನ್ನು ಸೇರಲಿದ್ದಾರಂತೆ.