JDS | ಅಸ್ತಿತ್ವಕ್ಕಾಗಿ ಇಬ್ರಾಹಿಂಗೆ ಜೆಡಿಎಸ್ ಚುಕ್ಕಾಣಿ..?
Congress mlc cm ibrahim H D Kumaraswamy JDS
ರಾಜ್ಯದಲ್ಲಿ ಸದ್ಯ ಜೆಡಿಎಸ್ ಪರಿಸ್ಥಿತಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಅಸ್ತಿತ್ವ ಕಳೆದುಕೊಳ್ಳುವ ಆತಂಕ ಎದುರಿಸುತ್ತಿದೆ.
ಹೀಗಾಗಿ ಕಾಂಗ್ರೆಸ್ ಬಿಡಲು ರೆಡಿಯಾಗಿರುವ ಎಂ.ಎಲ್.ಸಿ ಇಬ್ರಾಹಿಂ ಅವರಿಗೆ ಪಕ್ಷದ ಆಯಕಟ್ಟಿನ ಸ್ಥಾನ ನೀಡಿ ಗೌರವಿಸುವ ಮೂಲಕ ಅಲ್ಪಸಂಖ್ಯಾತ ಸಮುದಾಯದ ಮತಬ್ಯಾಂಕ್ ಗಿಟ್ಟಿಸಲು ಮುಂದಾಗಿದ್ದಾರೆ ಜೆಡಿಎಸ್ ನಾಯಕರು.
ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಸದ್ಯ ಸಕ್ರಿಯವಾಗಿ ಪಕ್ಷದ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿಲ್ಲ.
ಅವರು ಮುಂದಿನ ಚುನಾವಣೆ ವೇಳೆ ಪಕ್ಷ ತೊರೆಯುವ ಸಾಧ್ಯತೆಗಳಿವೆ ಅನ್ನೋ ಮಾತುಗಳು ಕೂಡ ಕೇಳಿಬರುತ್ತಿವೆ.
ಈ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಬದಲಾವಣೆ ತರಲು ಹೆಚ್.ಡಿ.ಕುಮಾರಸ್ವಾಮಿ ಮುಂದಾಗಿದ್ದು, ಹಲವು ಸ್ಥಾನಗಳಿಗೆ ಪ್ರಮುಖ ನಾಯಕರನ್ನು ನೇಮಿಸಲು ತೀರ್ಮಾನಿಸಿದ್ದಾರೆ.
ಅದರಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಗೆ ಇಬ್ರಾಹಿಂ ಅವರನ್ನು ನೇಮಿಸುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಇದಕ್ಕೆ ಪುಷ್ಠಿ ಕೊಡುವಂತೆ ಗುರುವಾರ ಸುದ್ದಿಗೋಷ್ಠಿ ನಡೆಸಿದ್ದ ಸಿಎಂ ಇಬ್ರಾಹಿಂ ಶೀಘ್ರದಲ್ಲಿಯೇ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ, ದೇವೇಗೌಡ ಅವರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.