ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಸೂತ್ರವಿಲ್ಲದ ಗಾಳಿಪಟವಾಯ್ತಾ ಕಾಂಗ್ರೆಸ್ ಪಕ್ಷ?

admin by admin
February 21, 2020
in International, Newsbeat, Politics
MP
Share on FacebookShare on TwitterShare on WhatsappShare on Telegram

ಸಾಲು ಸಾಲು ಹೀನಾಯ ಸೋಲುಂಡುತ್ತಿರುವ ಕಾಂಗ್ರೆಸ್ ಸದ್ಯಕ್ಕೆ ಚೇತರಿಸಿಕೊಳ್ಳುವ ಲಕ್ಷಣಗಳೇ ಕಾಣುತ್ತಿಲ್ಲ. ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ವಿಳಂಬ, ಮಧ್ಯ ಪ್ರದೇಶ ಕಾಂಗ್ರೆಸ್ ಭಿನ್ನಮತ ಮಾತ್ರವಲ್ಲದೇ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಇತರೆ ನಾಯಕರ ಅಸಮಾಧಾನ ಪಕ್ಷದಲ್ಲಿ ಎಲ್ಲವೂ ಗೊಂದಲಮಯವಾಗಿದೆ ಎಂಬುದನ್ನು ಸ್ಪಷ್ಟಪಡಿಸುತ್ತಿದೆ. ಕರ್ನಾಟಕ ಕಾಂಗ್ರೆಸ್ ಸಾರಥಿಯ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಅವರು ರಾಜೀನಾಮೆ ನೀಡಿ ಎರಡೂವರೆ ತಿಂಗಳಾಗುತ್ತಿದ್ದು, ರಾಜೀನಾಮೆ ಅಂಗೀಕರಿಸದೇ ನೂತನ ಅಧ್ಯಕ್ಷರನ್ನು ಪ್ರಕಟಿಸದೇ ವಿಳಂಬ ನೀತಿ ಅನುಸರಿಸುತ್ತಿವುದು ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಇದು ನಮ್ಮ ರಾಜ್ಯ ಸಂಗತಿಯಾದ್ರೆ, ಅತ್ತ ಮಧ್ಯ ಪ್ರದೇಶದಲ್ಲಿ ಕಮಲ್ ನಾಥ್ ಹಾಗೂ ಜ್ಯೋತಿರಾದಿತ್ಯ ಶಿಂದ್ಯಾ ನಡುವಣ ತಿಕ್ಕಾಟ ಜೋರಾಗಿದೆ. ಆದ್ರೆ ಇದನ್ನು ಬಗೆಹರಿಸಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗುತ್ತಲೇ ಇಲ್ಲ. ಇದು ನಾನಾ ಅನುಮಾನಗಳಿಗೆ ಕಾರಣವಾಗಿದೆ.

inc

Related posts

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

July 30, 2026
ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ನಿಯಮ; ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ

ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ನಿಯಮ; ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ

July 30, 2026

ಕಾರಣ ಏನಾಗಿರಬಹುದು ?
ರಾಜ್ಯಮಟ್ಟದ ಕಾಂಗ್ರೆಸ್ ಪಕ್ಷದ ಒಳಗೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಆದ್ರೆ ಇದರ ಬಗ್ಗೆ ಮಾತ್ರ ಕೈ ಹೈಕಮಾಂಡ್ ತಲೆಕೆಡಿಸಿಕೊಳ್ಳುತ್ತಿಲ್ಲ. ಇದಕ್ಕೆ ಕಾಂಗ್ರೆಸ್ ರಾಷ್ಟ್ರೀಯ ನಾಯಕರಲ್ಲಿರುವ ಅಸಮಾಧಾನವೇ ಕಾರಣ. ವಾಸ್ತವಾಂಶ ಏನೆಂದರೆ ಸದ್ಯ ಕಾಂಗ್ರೆಸ್ ಸೂತ್ರವಿಲ್ಲದ ಗಾಳಿಪಟದಂತಾಗಿದೆ. ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿ ನಂತರ ಸೋನಿಯಾ ಗಾಂಧಿ ಅವರೇ ಹಂಗಾಮಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಆದರೆ ಈಗ ನೂತನ ಅಧ್ಯಕ್ಷರ ಆಯ್ಕೆ ಮಾಡುವ ಕುರಿತು ಚರ್ಚೆ ಶುರುವಾಗಿದ್ದು, ರಾಹುಲ್ ಗಾಂಧಿ ಮೌನ ಇತರೆ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಹೈಕಮಾಂಡ್ ನಲ್ಲೇ ಒಗ್ಗಟ್ಟಿಲ್ಲ, ಹೀಗಾಗಿಯೇ ರಾಜ್ಯದ ನಾಯಕರನ್ನು ಯಾರು ಕಂಟ್ರೋಲ್ ಮಾಡಿ ಪಕ್ಷ ಕಟ್ಟುವತ್ತ ಹೆಜ್ಜೆ ಹಾಕುತ್ತಿಲ್ಲ.

ಈ ವಿಚಾರವಾಗಿ ಬಹಿರಂಗ ಹೇಳಿಕೆ ನೀಡಿರುವ ಶಶಿ ತರೂರ್, ಸದ್ಯ ಖಾಲಿ ಇರುವ ಪಕ್ಷದ ಸಾರಥ್ಯಕ್ಕೆ ಚುನಾವಣೆ ಮೂಲಕ ಆಯ್ಕೆ ಮಾಡಬೇಕು ಎಂದು ಹೇಳಿದ್ದಾರೆ. ಲೋಕಸಭೆ ಚುನಾವಣೆ ಸೋಲಿನ ನಂತರ ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮತ್ತೆ ಈ ಹುದ್ದೆ ಅಲಂಕರಿಸುವ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ. ಪಕ್ಷದ ಮುಂದಾಳತ್ವದ ಬಗ್ಗೆ ಸ್ಪಷ್ಟತೆ ಇಲ್ಲದಿರುವುದು ಇತ್ತೀಚಿನ ದೆಹಲಿ ಚುನಾವಣೆಯಲ್ಲಿ ಪಕ್ಷ ಶೂನ್ಯ ಸಾಧನೆ ಮಾಡುವಂತಾಯಿತು ಎಂದು ಬಹಿರಂಗವಾಗಿಯೇ ಹೇಳಿದ್ದಾರೆ.

ಮಹೇಶ್ ಎಂ ದಂಡು

Tags: CongressMadhya Pradesh
ShareTweetSendShare
Join us on:

Related Posts

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

by Shwetha
July 30, 2026
0

ದೇಶದಲ್ಲಿ ಜನನ ಮತ್ತು ಮರಣಗಳ ನೋಂದಣಿ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕ ಹಾಗೂ ವಿಶ್ವಾಸಾರ್ಹಗೊಳಿಸುವ ಉದ್ದೇಶದಿಂದ 'ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ–2026' ಅನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ....

ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ನಿಯಮ; ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ

ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ನಿಯಮ; ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ

by Shwetha
July 30, 2026
0

ಭಾರತೀಯ ರೈಲ್ವೆ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸುವ ಉದ್ದೇಶದಿಂದ ಹೊಸ ನಿಯಮವನ್ನು ಜಾರಿಗೆ ತರಲು ಮುಂದಾಗಿದೆ. ಆಗಸ್ಟ್ 1ರಿಂದ ದೇಶದಾದ್ಯಂತ ರೈಲ್ವೆ ನಿಲ್ದಾಣಗಳ ಮೀಸಲಾತಿ...

ಆಳುವವರು ಮೂರ್ಖರು, ಯುವಕರ ಮಾತು ಕೇಳಲ್ಲ: ಅಮಿತ್ ಶಾ ನನ್ನೆದುರು ನಿಲ್ಲಲು ನಡುಗುತ್ತಾರೆ -ಲೋಕಸಭೆಯಲ್ಲಿ ಮೋದಿ  ಸರ್ಕಾರವನ್ನು ಬೆಂಡೆತ್ತಿದ ರಾಹುಲ್ ಗಾಂಧಿ.

ಆಳುವವರು ಮೂರ್ಖರು, ಯುವಕರ ಮಾತು ಕೇಳಲ್ಲ: ಅಮಿತ್ ಶಾ ನನ್ನೆದುರು ನಿಲ್ಲಲು ನಡುಗುತ್ತಾರೆ -ಲೋಕಸಭೆಯಲ್ಲಿ ಮೋದಿ ಸರ್ಕಾರವನ್ನು ಬೆಂಡೆತ್ತಿದ ರಾಹುಲ್ ಗಾಂಧಿ.

by Shwetha
July 30, 2026
0

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಜಂತರ್ ಮಂತರ್ ಬಳಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿ ಚಾರ್ಜ್ ವಿಚಾರ ಇದೀಗ ಸಂಸತ್ತಿನಲ್ಲಿ ಭಾರೀ ಕೋಲಾಹಲಕ್ಕೆ...

ನಿನ್ನ ವಯಸ್ಸಿಗೆ ನಾನು ಎರಡು ರಾಷ್ಟ್ರ ಪ್ರಶಸ್ತಿ ಪಡೆದಿದ್ದೆ: ನೀಟ್ ಪ್ರತಿಭಟನಾಕಾರ ಸೌರವ್ ದಾಸ್ ಗೆ ಸಂಸದೆ ಕಂಗನಾ ರಣಾವತ್ ಖಡಕ್ ತಿರುಗೇಟು

ನಿನ್ನ ವಯಸ್ಸಿಗೆ ನಾನು ಎರಡು ರಾಷ್ಟ್ರ ಪ್ರಶಸ್ತಿ ಪಡೆದಿದ್ದೆ: ನೀಟ್ ಪ್ರತಿಭಟನಾಕಾರ ಸೌರವ್ ದಾಸ್ ಗೆ ಸಂಸದೆ ಕಂಗನಾ ರಣಾವತ್ ಖಡಕ್ ತಿರುಗೇಟು

by Shwetha
July 30, 2026
0

ನವದೆಹಲಿ: ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ ಕಂಗನಾ ರಣಾವತ್ ಮತ್ತು ಯುವ ಹೋರಾಟಗಾರ ಸೌರವ್ ದಾಸ್ ನಡುವಿನ ವಾಕ್ಸಮರ ಇದೀಗ...

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

by Shwetha
July 30, 2026
0

ಬೆಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು, ಆ ಸ್ಥಾನಕ್ಕೆ ಕನ್ನಡಿಗ ಹಾಗೂ ಸಂಸದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram