ಹಾಸನ : 150 ವರ್ಷ ಇತಿಹಾಸ ಇರುವ ಕಾಂಗ್ರೆಸ್ ಪಾರ್ಟಿ ಕೋಮುವಾದಿ ಬಿಜೆಪಿ ಜೊತೆ ಸೇರಿದೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ( HD Revanna ) ಆರೋಪಿಸಿದ್ದಾರೆ. ತುಮಕೂರಿನಲ್ಲಿ ದೇವೇಗೌಡ, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಯಾಕೆ ಗೆಲ್ಲಲ್ಲಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಹಾಸನದಲ್ಲಿ ಹೆಚ್.ಡಿ.ರೇವಣ್ಣ (HD Revanna) ಪ್ರತಿಕ್ರಿಯೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, ಮಂಡ್ಯ ಮತ್ತು ತುಮಕೂರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಕಾಂಗ್ರೆಸ್ ನವರು ಹೊಂದಾಣಿಕೆ ಮಾಡಿಕೊಂಡಿದ್ದರು.
ಇದನ್ನೂ ಓದಿ :ಸಿ.ಟಿ ರವಿ ಸಮ್ಮಖದಲ್ಲಿ `ಕಮಲ’ ಹಿಡಿದ ಖುಷ್ಬೂ
ಕುಮಾರಸ್ವಾಮಿ ಮಗನಿಗೆ ಮಂಡ್ಯದಲ್ಲಿ ಜೆಡಿಎಸ್ ಮತಗಳು ಸರಿಯಾಗಿ ಬಂದಿದೆ. 150 ವರ್ಷ ಇತಿಹಾಸ ಇರುವ ಪಕ್ಷ ಕಾಂಗ್ರೆಸ್ ಪಕ್ಷ ಕೋಮುವಾದಿಗಳ ಜೊತೆ ಸೇರಿದೆ ಎಂದು ಕಿಡಿಕಾರಿದರು.
ಇನ್ನು ಹಾಸನದಲ್ಲಿ ಜಿಲ್ಲಾಧಿಕಾರಿ ಕಚೇರಿಗಳ ಅಧಿಕಾರಿಗಳು ಬಿಜೆಪಿ ಮುಖಂಡರ ಅಧೀನದಲ್ಲಿ ಕೆಲಸ ಮಾಡುತ್ತಿದ್ದಾರೆ.
ಇದನ್ನೂ ಓದಿ : ಡಿಸಿಎಂ ನಿರೀಕ್ಷೆಯಲ್ಲಿದ್ದ ಶ್ರೀರಾಮುಲುಗೆ ಡಬಲ್ ಶಾಕ್
ರಾಜ್ಯದಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೆ ಮಾತ್ರ ಸರ್ಕಾರಿ ಕಚೇರಿಗಳು ತೆರೆದಿರುತ್ತವೆ. ಆದ್ರ ಹಾಸನದಲ್ಲಿ ಮಧ್ಯರಾತ್ರಿಯ ವರೆಗೆ ತೆರೆದಿರುತ್ತದೆ ಎಂದು ರೇವಣ್ಣ ಆರೋಪ ಮಾಡಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel