ಬೆಂಗಳೂರು : ಗ್ರಾಮ ಪಂಚಾಯಿತಿ ಚುನಾವಣೆಯನ್ನು ಮುಂದೂಡಿಕೆ ಮಾಡಿದ ಹಿನ್ನೆಲೆ ರಾಜ್ಯ ಚುನಾವಣಾ ಆಯೋಗದ ನಡೆಯಿಂದ ಅಸಮಾಧಾನಗೊಂಡಿರುವ ಕಾಂಗ್ರೆಸ್ ನಾಯಕರು, ಕೋರ್ಟ್ ಮೆಟ್ಟಿಲೇರಲು ಮುಂದಾಗಿದ್ದಾರೆ. ಕೊರೊನಾ ನೆಪವಾಗಿಟ್ಟುಕೊಂಡು ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಮುಂದೂಡಬಾರದೆಂದು ಈ ಹಿಂದೆ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಆದ್ರೆ ಚುನಾವಣಾ ಆಯೋಗ ಎಲೆಕ್ಷನ್ ಅನ್ನು ಮುಂದೂಡಿಕೆ ಮಾಡಿದೆ. ಇದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕರು ಕೋರ್ಟ್ ಗೆ ಹೋಗಲು ನಿರ್ಧರಿಸಿದ್ದು, ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿದ್ದಾರೆ.
ಮೂಲಗಳ ಪ್ರಕಾರ ಶ್ರೀಘ್ರದಲ್ಲೇ ಕೋರ್ಟ್ ನಲ್ಲಿ ಸರ್ಕಾರದ ನಡೆಯನ್ನ ಪ್ರಶ್ನಿಸಿ ಕಾಂಗ್ರೆಸ್ ದೂರು ಸಲ್ಲಿಸುವ ಸಾಧ್ಯತೆಯಿದೆ. ಗ್ರಾಮ ಪಂಚಾಯ್ತಿ ಚುನಾವಣೆವನ್ನು ಮುಂದೂಡಿರುವ ಚುನಾವಣಾ ಆಯೋಗದ ಮೇಲೆ ಸರ್ಕಾರದ ಒತ್ತಡವಿದೆ ಎಂದು ಆರೋಪಿಸಿ ದೂರು ಸಲ್ಲಿಸಲಿದೆ.








