137 ವರ್ಷದ ಹಳೆಯ ಪಕ್ಷದಲ್ಲಿ ಖರ್ಗೆ ರಾಜ್ಯಭಾರ ಶುರು…
80 ವರ್ಷ ವಯಸ್ಸಿನ ಮಲ್ಲಿಕಾರ್ಜುನ ಖರ್ಗೆ ಅವರು 137 ವರ್ಷದ ಹಳೆಯ ಪಕ್ಷಕ್ಕೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಶಶಿ ತರೂರ್ ಅವರನ್ನ 6,825 ಮತಗಳಿಂದ ಸೋಲಿಸಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ.
ಒಂಬತ್ತು ಬಾರಿ ಶಾಸಕರಾಗಿ, ಎರಡು ಬಾರಿ ಸಂಸದರಾಗಿದ್ದ ಖರ್ಗೆ 1972 ರಲ್ಲಿ ಮೊದಲ ಬಾರಿಗೆ ಚುನಾವಣಾ ಕಣಕ್ಕೆ ಇಳಿದಿದ್ದರು. ಅಂದಿನಿಂದ, ಅವರು 2019 ರ ಲೋಕಸಭೆ ಚುನಾವಣೆಯಲ್ಲಿ ಒಮ್ಮೆ ಮಾತ್ರ ಸೋತಿದ್ದಾರೆ.
ಕಾಂಗ್ರೆಸ್‌ನಲ್ಲಿ 24 ವರ್ಷಗಳ ನಂತರ ಗಾಂಧಿ ಕುಟುಂಬದ ಹೊರಗಿನ ನಾಯಕರೊಬ್ಬರು ಅಧ್ಯಕ್ಷರಾಗಿದ್ದಾರೆ. ಇದಕ್ಕೂ ಮೊದಲು 1998 ರಿಂದ 2017 ರವರೆಗೆ ಸೋನಿಯಾ ಗಾಂಧಿ ಅಧ್ಯಕ್ಷರಾಗಿದ್ದರು. 2017 ರಿಂದ 19 ರವರೆಗೆ ಈ ಜವಾಬ್ದಾರಿಯನ್ನು ರಾಹುಲ್ ಗಾಂಧಿ ನಿಭಾಯಿಸಿದ್ದರು. ಅಂದಿನಿಂದ ಸೋನಿಯಾ ಪಕ್ಷದ ಹಂಗಾಮಿ ಅಧ್ಯಕ್ಷರಾಗಿದ್ದಾರೆ.
ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿ ಆರನೇ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದೆ. ಅಧ್ಯಕ್ಷ ಸ್ಥಾನಕ್ಕೆ ಇದುವರೆಗೆ 1939, 1950, 1977, 1997 ಮತ್ತು 2000 ರಲ್ಲಿ ಚುನಾವಣೆಗಳು ನಡೆದಿವೆ. 22 ವರ್ಷಗಳ ನಂತರ ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ.
24 ವರ್ಷಗಳ ನಂತರ ಗಾಂಧಿ ಕುಟುಂಬದ ಹೊರಗಿನ ನಾಯಕರೊಬ್ಬರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಲಿದ್ದಾರೆ. ಈ ಮೊದಲು ಸೀತಾರಾಮ್ ಕೇಸರಿ ಅವರು ಗಾಂಧಿಯೇತರ ಅಧ್ಯಕ್ಷರಾಗಿದ್ದರು.
Congress President : Mallikarjun Kharge’s reign in 137-year-old party begins…







