Congress President : ಕಾಂಗ್ರೆಸ್ ಚುಕ್ಕಾಣಿ ಹಿಡಿದ ಕನ್ನಡಿಗ ಮಲ್ಲಿಕಾರ್ಜುನ್ ಖರ್ಗೆ
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗಾಂಧಿ ಕುಟುಂಬದ ಆಪ್ತರಾದ ಮಲ್ಲಿಕಾರ್ಜುನ ಖರ್ಗೆ ಪ್ರಚಂಡ ಗೆಲುವು ಸಾಧಿಸಿದ್ದಾರೆ. ಮಲ್ಲಿಕಾರ್ಜುನ್ ಖರ್ಗೆ 7897 ಮತಗಳನ್ನ ಪಡೆಯುವ ಮೂಲಕ ಅಧ್ಯಕ್ಷ ಹುದ್ದೆಗೆ ಆಯ್ಕೆಯಾಗಿದ್ದಾರೆ. ದೆಹಲಿಯ ಕಾಂಗ್ರೆಸ್ ಪ್ರಧಾನ ಕಛೇರಿಯಲ್ಲಿ ಇಂದು ಬೆಳಿಗ್ಗೆ 10 ಗಂಟೆಯಿಂದ ಎಣಿಕೆ ಮಾಡಲಾಗಿತ್ತು.
ಈ ಮೂಲಕ 24 ವರ್ಷಗಳ ನಂತರ ಗಾಂಧಿ ಕುಟುಂಬದ ಹೊರಗಿನ ನಾಯಕರೊಬ್ಬರು ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದರು. ವಿಶೇಷವೆಂದರೆ ದೇಶದ ಅಂತ್ಯಂತ ಹಳೆಯ ಪಕ್ಷಕ್ಕೆ ಕನ್ನಡಿಗ ಚುಕ್ಕಾಣಿ ಹಿಡಿದಿದ್ದಾರೆ.
ಶಶಿ ತರೂರ್ 1072 ಮತ ಪಡೆದಿದ್ದಾರೆ ಎಂದು ಕಾಂಗ್ರೆಸ್ ನಾಯಕ ಪ್ರಮೋದ್ ತಿವಾರಿ ಮಾಹಿತಿ ನೀಡಿದ್ದಾರೆ. ಈ ಮೂಲಕ ಖರ್ಗೆ 6807 ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು.
ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಪ್ರತಿ ಸ್ಪರ್ದಿ ಕಾಂಗ್ರೆಸ್ ನಾಯಕ ಶಶಿ ತರೂರ್ ಅಭಿನಂದಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿ ಆರನೇ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದೆ. ಅಧ್ಯಕ್ಷ ಸ್ಥಾನಕ್ಕೆ ಇದುವರೆಗೆ 1939, 1950, 1977, 1997 ಮತ್ತು 2000 ರಲ್ಲಿ ಚುನಾವಣೆಗಳು ನಡೆದಿವೆ. 22 ವರ್ಷಗಳ ನಂತರ ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ.
24 ವರ್ಷಗಳ ನಂತರ ಗಾಂಧಿ ಕುಟುಂಬದ ಹೊರಗಿನ ನಾಯಕರೊಬ್ಬರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಲಿದ್ದಾರೆ. ಈ ಮೊದಲು ಸೀತಾರಾಮ್ ಕೇಸರಿ ಅವರು ಗಾಂಧಿಯೇತರ ಅಧ್ಯಕ್ಷರಾಗಿದ್ದರು.
Congress President: Mallikarjun Kharge wins as the new president…