ನವದೆಹಲಿ : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಿಂದ ಇಂದು ಅವರು ಡಿಸ್ಚಾರ್ಜ್ ಆಗಿದ್ದಾರೆ. ಜುಲೈ 30ರಂದು ರೂಟಿನ್ ಚೆಕ್ ಅಪ್ ಮತ್ತು ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಲು ಸರ್ ಗಂಗಾ ರಾಮ್ ಆಸ್ಪತ್ರೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದಾಖಲಾಗಿದ್ದರು.
ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿ ಅವರಿಗೆ ಎದೆ ಮತ್ತು ಉಸಿರಾಟದ ತಜ್ಞ ಡಾ.ಅರೂಪ್ ಕುಮಾರ್ ಬಸು ನೇತೃತ್ವದ ವೈದ್ಯರ ತಂಡವು ಆರೋಗ್ಯ ತಪಾಸಣೆ ನಡೆಸಿತು. ಸದ್ಯ ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆಸ್ಪತ್ರೆಯ ಚೇರ್ ಮನ್ ಡಾ.ಡಿ.ಎಸ್.ರಾಣಾ ತಿಳಿಸಿದ್ದಾರೆ.