ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ಹೊಸದಿಲ್ಲಿ, ಜುಲೈ 30: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಗುರುವಾರ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಕಾಂಗ್ರೆಸ್ ಅಧ್ಯಕ್ಷೆ ವಾಡಿಕೆಯ ಪರೀಕ್ಷೆಗಳಿಗೆ ಒಳಗಾಗಿದ್ದಾರೆ ಎಂದು ಅಧಿಕಾರಿಗಳು ಉಲ್ಲೇಖಿಸಿದ್ದಾರೆ. ಸರ್ ಗಂಗಾ ರಾಮ್ ಆಸ್ಪತ್ರೆಯ ಅಧ್ಯಕ್ಷ (ಬೋರ್ಡ್ ಆಫ್ ಮ್ಯಾನೇಜ್ಮೆಂಟ್) ಡಾ.ಡಿ.ಎಸ್. ರಾಣಾ ಸೋನಿಯಾ ಗಾಂಧಿ ಅವರನ್ನು ವಾಡಿಕೆಯ ಪರೀಕ್ಷೆಗಾಗಿ ಸಂಜೆ 7 ಗಂಟೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ ಎಂದು ಹೇಳಿದ್ದಾರೆ