Breaking News: ಸೋನಿಯಾ ಗಾಂಧಿ ಅವರ ತಾಯಿ ಪಾವೊಲಾ ಮೈನೋ ನಿಧನ..
ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಪಾವೊಲಾ ಮೈನೋ ನಿಧನರಾಗಿದ್ದಾರೆ ಎಂದು ಪಕ್ಷದ ಸಂವಹನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಬುಧವಾರ ಟ್ವೀಟ್ ಮಾಡಿದ್ದಾರೆ. ಪಾವೊಲಾ ಮೈನೊ ಆಗಸ್ಟ್ 27 ರಂದು ಇಟಲಿಯಲ್ಲಿ ಕೊನೆಯುಸಿರೆಳೆದಿದ್ದಾರೆ.
“ಶ್ರೀಮತಿ. ಸೋನಿಯಾ ಗಾಂಧಿಯವರ ತಾಯಿ, ಶ್ರೀಮತಿ ಪಾವೊಲಾ ಮೈನೊ ಅವರು 27 ಆಗಸ್ಟ್ 2022 ರಂದು ಶನಿವಾರ ಇಟಲಿಯಲ್ಲಿ ತಮ್ಮ ಮನೆಯಲ್ಲಿ ನಿಧನರಾದರು. ನಿನ್ನೆ ಅಂತ್ಯಕ್ರಿಯೆ ನಡೆಯಿತು ”ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.
ಸೋನಿಯಾ, ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಈಗಾಗಲೇ ವಿದೇಶದಲ್ಲಿದ್ದು, ಅವರ ಹುಟ್ಟೂರಿಗೆ ಭೇಟಿ ನೀಡಿದ್ದಾರೆ.
Congress president Sonia Gandhi’s mother, Paola Maino, died, Jairam Ramesh, Maino breathed her last in Italy on August 27








