Congress protest : BJP ಶಾಸಕ ಬಂಧನ ಮತ್ತು ಸಿಎಂ ರಾಜಿನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ…
ಪುತ್ರನಿಂದ ಲಂಚ ಪಡೆದು ಸಿಕ್ಕಿಬಿದ್ದಿರುವ ಚೆನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನ ಬಂಧಿಸಬೇಕು ಮತ್ತು ನೈತಿಕ ಹೊಣೆಹೊತ್ತು ಸಿಎಂ ಬಸವರಾಜ್ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಶನಿವಾರ ಕಾಂಗ್ರೆಸ್ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಿದೆ.
ಬೆಂಗಳೂರಿನ ರೇಸ್‌ಕೋರ್ಸ್ ರಸ್ತೆಯ ಬಳಿಕ ಕಾಂಗ್ರೆಸ್ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿತು. ಈ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯರನ್ನ ಪೊಲೀಸರು ಬಂಧಿಸಿದರು. ಇದಕ್ಕೂ ಮುನ್ನ ಹಿರಿಯ ನಾಯಕರು ಪೋಸ್ಟರ್‌ಗಳನ್ನು ಹಿಡಿದು ಸಿಎಂ ಮನೆಗೆ ಮುತ್ತಿಗೆ ಹಾಕಲು ಯತ್ನ ಮಾಡಿದರು. ಇದನ್ನು ಪೊಲೀಸರು ತಡೆದಾಗ ರಸ್ತೆಯ ಮೇಲೆ ಕುಳಿತು ಪ್ರತಿಭಟನೆ ಮಾಡಲು ಅರಂಭಿಸಿದರು.
ಈ ವೇಳೆ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ ಸಿದ್ಧರಾಮಯ್ಯ, ನೈತಿಕ ಹೊಣೆ ಹೊತ್ತು ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಬೇಕು’ ಎಂದು ಹೇಳಿದರು.
ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಹಾಗೂ ಕೆಎಎಸ್ ಅಧಿಕಾರಿ ಪ್ರಶಾಂತ್ ಮಾಡಾಳ್ ಅವರ ಮೇಲೆ ನಡೆದ ಲೋಕಾಯುಕ್ತ ದಾಳಿ, ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.
Congress protest: Congress protest demanding arrest of BJP MLA and resignation of CM…
#WATCH | Several Congress leaders including former CM Siddaramaiah detained by Police during their protest against the Karnataka govt in Bengaluru demanding the arrest of BJP MLA Maadal Virupaksha whose son was caught taking bribe pic.twitter.com/3x8aJsk3WU
— ANI (@ANI) March 4, 2023