Congress | ಬೆಲೆ ಏರಿಕೆ ಖಂಡಿಸಿ ಮಾರ್ಚ್ 31ಕ್ಕೆ ಕಾಂಗ್ರೆಸ್ ಪ್ರೊಟೆಸ್ಟ್
ಬೆಂಗಳೂರು : ರಾಷ್ಟ್ರೀಯ ಕಾಂಗ್ರೆಸ್ ಕರೆಯ ಮೇರೆಗೆ ಮಾರ್ಚ್ 31ರಂದು ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ದೇಶದಾದ್ಯಂತ ಕಳೆದ ಕೆಲ ದಿನಗಳಿಂದ ಬೆಲೆ ಏರಿಕೆಯಾಗುತ್ತಲೇ ಇದೆ.
ಮೊದಲು ಅಗತ್ಯ ವಸ್ತುಗಳ ಬೆಲೆ ಏರಿಕೆಯಾದ್ರೆ, ಇದೀಗ ತೈಲ ಬೆಲೆ ಕೂಡ ಹೆಚ್ಚಾಗುತ್ತಿದೆ.
ಕಳೆದ 8 ದಿನಗಳಿಂದ ದೇಶದಾದ್ಯಂತೆ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗುತ್ತಲೇ ಇದೆ.
ಇದನ್ನ ಖಂಡಿಸಿ ಮಾರ್ಚ್ 31 ರಂದು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಪಕ್ಷ ಮುಂದಾಗಿದೆ.
ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಡಿ.ಕೆ.ಶಿವಕುಮಾರ್, ರಾಷ್ಟ್ರೀಯ ಕಾಂಗ್ರೆಸ್ ಕರೆಯ ಮೇರೆಗೆ ಮಾರ್ಚ್ 31ರಂದು ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ರಾಜ್ಯದ ಎಲ್ಲ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ತಮ್ಮ ಮನೆಯ ಮುಂದೆ ಪ್ರತಿಭಟನೆ ಮಾಡಬೇಕು.
ತಮ್ಮ ಗ್ಯಾಸ್ ಸಿಲಿಂಡರ್, ವಾಹನಗಳನ್ನು ಮನೆಯ ಮುಂದೆ ಇಟ್ಟು ಹೂವಿನ ಹಾರ ಹಾಕಿ, ಜಾಗಟೆ ಬಾರಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ. Congress Protest March 31 to condemn price hike