ಕಾಂಗ್ರೆಸ್ ಪ್ರೊಟೆಸ್ಟ್ : ಸಿದ್ದರಾಮಯ್ಯ, ಡಿಕೆಶಿ, ಪರಮೇಶ್ವರ್ ಪೊಲೀಸ್ ವಶಕ್ಕೆ
ಬೆಂಗಳೂರು : ರಾಜಭವನಕ್ಕೆ ಮುತ್ತಿಗೆ ಯತ್ನ ಹಿನ್ನೆಲೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,ಡಾ.ಜಿ.ಪರಮೇಶ್ವರ ಸೇರಿದಂತೆ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇಂದ್ರ ಸರ್ಕಾರದ ಕೃಷಿ ಮಸೂದೆಗಳನ್ನು ವಿರೋಧಿಸಿ ಇಂದು ರಾಜ್ಯ ಕಾಂಗ್ರೆಸ್ ರಾಜಭವನ ಚಲೋ ರ್ಯಾಲಿ ಹಮ್ಮಿಕೊಂಡಿತ್ತು. ಇದರಲ್ಲಿ ಸಾವಿರಾರು ಸಂಖ್ಯೆಯಲ್ಲಿ ರೈತರು ಭಾಗಿಯಾಗಿದ್ದರು.
ಮೊದಲು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ಫ್ರೀಡಂ ಪಾಕ್ ವರೆಗೆ ಮೆರವಣಿಗೆ ಹೊರಟರು. ಅಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ರು. ಬಳಿಕ ಅಲ್ಲಿಂದ ರಾಜಭವನ ಮುತ್ತಿಗೆಗೆ ತೆರಳಿದ್ರು.

ಈ ವೇಳೆ ರಾಜಭವನಕ್ಕೆ ಮುತ್ತಿಗೆ ಹಾಕಲು ತೆರಳಿದಂತ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರನ್ನು ಪೊಲೀಸರು ಮನವೊಲಿಸೋದಕ್ಕೆ ಮುಂದಾಗಿದ್ದರು.
ಬಳಿಕ ಕಾಂಗ್ರೆಸ್ ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆದಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಡಾ.ಜಿ.ಪರಮೇಶ್ವರ್ ಸೇರಿದಂತೆ ಅನೇಕ ಕಾರ್ಯಕರ್ತರು, ರೈತರನ್ನು ಪೆÇಲೀಸರು ಮಹಾರಾಣಿ ಕಾಲೇಜಿನ ಬಳಿಯಲ್ಲೇ ವಶಕ್ಕೆ ಪಡೆದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








