Chikkamagaluru: ಈಶ್ವರಪ್ಪ ಅವರನ್ನು ಬಂಧಿಸುವಂತೆ ಚಿಕ್ಕಮಗಳೂರುನಲ್ಲಿ ಬೃಹತ್ ಪ್ರತಿಭಟನೆ
1 min read
ಈಶ್ವರಪ್ಪ ಅವರನ್ನು ಬಂಧಿಸುವಂತೆ ಚಿಕ್ಕಮಗಳೂರುನಲ್ಲಿ ಬೃಹತ್ ಪ್ರತಿಭಟನೆ
ಚಿಕ್ಕಮಗಳೂರು: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಚಿಕ್ಕಮಗಳೂರುನಲ್ಲಿ ಬೃಹತ್ ಪ್ರತಿಭಟನೆ ಮಾಡುತ್ತಿದ್ದಾರೆ.
ಜಿಲ್ಲಾ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಗೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಗವಹಿಸಿ ಸಾಥ್ ನೀಡಿದ್ದಾರೆ. ನಗರದ ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್ ಸರ್ಕಲ್ವರೆಗೂ ಪ್ರತಿಭಟನಾ ರ್ಯಾಲಿ ನಡೆದಿದ್ದು, ಈ ವೇಳೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನಾ ರ್ಯಾಲಿಯಲ್ಲಿ ಈಶ್ವರಪ್ಪ ಬಂಧನಕ್ಕೆ ಆಗ್ರದ ಜೊತೆಗೆ ಬೆಲೆ ಏರಿಕೆಯ ವಿರುದ್ಧವೂ ಘೋಷಣೆ ಕೂಗಲಾಯಿತು. ಅಲ್ಲದೇ, ಸಿಲಿಂಡರ್ ಅಣಕು ಶವಯಾತ್ರೆ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲಾಯಿತು.