ನವದೆಹಲಿ: ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರದಿಂದ ಉಂಟಾದ ಸಾವು -ನೋವನ್ನು ಖಂಡಿಸಿ ಕಾಂಗ್ರೆಸ್ ಸಂಸದರು ಸಂಸತ್ತಿನ ದ್ವಾರದ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೂ ಮೊದಲು ಉಭಯ ಸದನಗಳಲ್ಲಿ ದೆಹಲಿ ಹಿಂಸಾಚಾರ ಕುರಿತು ಚರ್ಚೆಗೆ ಅವಕಾಶ ನೀಡಬೇಕೆಂದು ಕಾಂಗ್ರೆಸ್ ನಾಯಕರು ಮನವಿ ಮಾಡಿಕೊಂಡಿದ್ದರು. ಆದ್ರೆ ಉಭಯ ಸದನಗಳ ಸ್ಪೀಕರ್ ಗಳು ಚರ್ಚೆಗೆ ಅವಕಾಶ ನೀಡದೆ ಸದನವನ್ನು ಮುಂದೂಡಿದರು. ಇದರ ಹಿನ್ನೆಲೆ ಕಾಂಗ್ರೆಸ್ ನಾಯಕರು ಸಂಸತ್ತಿನ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು, ಅಮಿತ್ ಶಾ ರಾಜೀನಾಮೆ ನೀಡಬೇಕು. ಭಾರತವನ್ನು ರಕ್ಷಣೆ ಮಾಡಬೇಕು. ಪ್ರಧಾನಮಂತ್ರಿಗಳೇ ನಮ್ಮ ಪ್ರಶ್ನೆಗೆ ಉತ್ತರ ನೀಡಿ ಎಂದು ಘೋಷಣೆ ಕೂಗುತ್ತಿದ್ದಾರೆ.
ಇನ್ನು ಪ್ರತಿಭಟನೆ ವೇಳೆ ಮಾತನಾಡಿರುವ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು, ದೆಹಲಿ ಹಿಂಸಾಚಾರ ಕುರಿತು ನಮಗೆ ಚರ್ಚೆಗೆ ಅವಕಾಶ ನೀಡಬೇಕೆಂಬುದು ನಮ್ಮ ಮೊದಲ ಆಗ್ರಹವಾಗಿದೆ. ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ನಾವು ಆಗ್ರಹಿಸುತ್ತೇನೆ. ಅಲ್ಲದೆ, ಪ್ರಧಾನಮಂತ್ರಿಗಳು ನಮಗೆ ಉತ್ತರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಪಂಚಮಸಾಲಿ ಪ್ರತಿಭಟನೆ ಗಾಯದ ಮೇಲೆ ‘ಉಪ್ಪು’ ಸವರಿದ CM & ಕಿಚ್ಚು ಹೊತ್ತಿಸಿದ ‘ಪರಂ’..!
ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂದೆ ಪಂಚಮಸಾಲಿ ಲಿಂಗಾಯತ ಸಮುದಾಯದ ಮೇಲಿನ ಲಾಠಿಚಾರ್ಜ್ ಸಂಬಂಧ ಸಮುದಾಯದ ಹೋರಾಟದ ಕಿಚ್ಚು ಜ್ವಾಲಾಮುಖಿಯಾಗಿ ಸರ್ಕಾರದ ಅಡಿಪಾಯಕ್ಕೆ ಬಿಸಿಮುಟ್ಟಿಸತೊಡಗಿದೆ ಈ ಬಗ್ಗೆ ಇನ್...