Congress | ಬೆಂಗಳೂರಿನ ಇ.ಡಿ ಕಚೇರಿ ಬಳಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ
ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ಜಾರಿ ನಿರ್ದೇಶನಾಲಯ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ರಾಹುಲ್ ವಿಚಾರಣೆ ಖಂಡಿಸಿ, ಡೆಲ್ಲಿಯ ಇಡಿ ಮುಖ್ಯ ಕಚೇರಿ ಹಾಗೂ ದೇಶದ ವಿವಿಧ ಇಡಿ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿದೆ.
ಅದರಂತೆ ಬೆಂಗಳೂರಿನ ಇ.ಡಿ ಕಚೇರಿ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್., ವಿಧಾನಸಭೆ ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಹರಿಪ್ರಸಾದ್, ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು.

ಅಂದಹಾಗೆ ಇಡಿ ಸಮನ್ಸ್ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಇಡಿ ವಿಚಾರಣೆಗೆ ಹಾಜರಾದ ರಾಹುಲ್‌ಗಾಂಧಿ ಎಐಸಿಸಿ ಕಚೇರಿಯಿಂದ ಸುಮಾರು 7 ಕಿ.ಮೀ. ಪಾದಯಾತ್ರೆ ನಡೆಸಿ ಇಡಿ ಕಚೇರಿ ತಲುಪಿದರು.
ಬೆಂಗಳೂರಿನಲ್ಲಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಹೆಚ್ಚಿನ ಕಾರ್ಯಕರ್ತರು ಜಮಾಯಿಸಿದ್ದರು.
ಈ ಹಿನ್ನೆಲೆಯಲ್ಲಿ ಶಾಂತಿನಗರ, ಲಾಲ್‌ಬಾಗ್, ವಿಲ್ಸನ್ ಗಾರ್ಡನ್ ಸುತ್ತಮುತ್ತಲಿನ ಏರಿಯಾಗಳಲ್ಲಿ ಸೋಮವಾರ ಟ್ರಾಫಿಕ್ ಜಾಮ್ ಉಂಟಾಗಿತ್ತು.