ಬೆಂಗಳೂರು: ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದಾಳಿ ನಡೆಸುತ್ತಿದೆ ಎಮದು ಆರೋಪಿ ರಾಜ್ಯ ಕಾಂಗ್ರೆಸ್ ನಾಳೆ ರಾಜಭವನ ಎದುರು ಪ್ರತಿಭಟನೆ ನಡೆಸಲಿದೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚನೆಯಂತೆ ನಾಳೆ ಮಧ್ಯಾಹ್ನ 1.30ಕ್ಕೆ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ.
ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ರಕ್ಷಿಸಿ ಎಂಬ ಅಭಿಯಾನದಡಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಕಮಲ್‍ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಳಿಸಿ ಅಧಿಕಾರಕ್ಕೆ ಬರುವಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರು ಯಶಸ್ವಿಯಾಗಿದ್ದರು. ಈಗ ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ನಾಯಕರು ಯತ್ನಿಸಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆಗೆ ಕರೆ ನೀಡಿದೆ.
ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ರಾಜ್ಯಪಾಲರ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಎಂದು ರಾಜ್ಯದ ಎಲ್ಲಾ ಕಾಂಗ್ರೆಸ್ ನಾಯಕರಿಗೆ ಡಿ.ಕೆ ಶಿವಕುಮಾರ್ ಪತ್ರ ಬರೆದಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಡಾ. ಜಿ ಪರಮೇಶ್ವರ್, ರಾಮಲಿಂಗಾ ರೆಡ್ಡಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ಧಾರೆ.
ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.
ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ...








