ನವದೆಹಲಿ: ಲೋಕಸಭಾ ಚುನಾವಣೆ ಕಾವು ರಂಗೇರಿದ್ದು, ಮೂರು ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ.
ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ 7 ಜನ ಅಭ್ಯರ್ಥಿ ಆಯ್ಕೆ ಅಂತಿಮಗೊಳಿಸಿದೆ. ಇನ್ನುಳಿದ 21 ಅಭ್ಯರ್ಥಿಗಳ ಕುರಿತು ನಾಳೆ ಒಳಗೆ ತೆರೆ ಬೀಳಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕಾಂಗ್ರೆಸ್ 17 ಅಭ್ಯರ್ಥಿಗಳನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ. ಅಲ್ಲದೇ, ಇನ್ನುಳಿದ ನಾಲ್ಕು ಕ್ಷೇತ್ರದ ಕುರಿತು ಚರ್ಚೆ ನಡೆಯುತ್ತಿದೆ. ಬೆಂಗಳೂರಿಗೆ ಹೋಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಾಲ್ಕು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಐವರು ಮಹಿಳೆಯರಿಗೆ ಟಿಕೆಟ್ ನೀಡಿದ್ದೇವೆ. ಜೊತೆಗೆ ಶೇಕಡ 50ರಷ್ಟು ಹೆಚ್ಚು ಟಿಕೆಟ್ಗಳನ್ನ ಈ ಸಲ ಯುವಕರಿಗೆ ನೀಡಿದ್ದೇವೆ. ಕೋಲಾರ ಲೋಕಸಭೆಯಲ್ಲಿ ಗೊಂದಲ ಇರುವ ಹಿನ್ನೆಲೆಯಲ್ಲಿ ಎರಡೂ ಕಡೆಯ ಬೆಂಬಲಿಗರು ಭೇಟಿ ಮಾಡಿದ್ದಾರೆ. ಅಂತಿಮವಾಗಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಕುಟುಂಬ ರಾಜಕಾರಣದ ಕುರಿತು ಮಾತನಾಡಿದ ಅವರು, ಯಡಿಯೂರಪ್ಪ ಮನೆಯಲ್ಲಿ ಕುಟುಂಬ ರಾಜಕಾರಣ ಇಲ್ವಾ ಎಂದು ಪ್ರಶ್ನಿಸಿದ್ದಾರೆ.
ಬೇರೆ ಪಕ್ಷದ ನಾಯಕರು ಕಾಂಗ್ರೆಸ್ಗೆ ಬರುವ ಬಗ್ಗೆ ಬಹಿರಂಗವಾಗಿ ಮಾತನಾಡುವುದಿಲ್ಲ. ಕೆಲವು ಸಂಸದರು ಕಾಂಗ್ರೆಸ್ ಸೇರ್ಪಡೆ ವಿಚಾರ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.