ಮಧ್ಯಪ್ರದೇಶದ ರಾಜಕೀಯದಲ್ಲಿ ಭಾರಿ ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿದ್ದು, ಜ್ಯೋತಿರಾಧಿತ್ಯ ಸಿಂಧಿಯಾ ರಾಜೀನಾಮೆಯಿಂದ ಕಮಲ್ ನಾಥ್ ಸರ್ಕಾರ ಸಂಕಟಕ್ಕೆ ಸಿಲುಕಿದೆ. ಇತ್ತ ಸಿಂಧಿಯಾ ಅವರು ಬಿಜೆಪಿಗೆ ಸೇರಲು ತಯಾರಿ ಆರಂಭಿಸಿದ್ದು, ರಾಜ್ಯದಲ್ಲಿ ಮತ್ತೆ ಕಮಲ ಪತಾಕೆ ಹಾರಾಡಲಿದೆ ಎಂದು ಹೇಳಲಾಗುತ್ತಿದೆ. ಆದ್ರೆ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ರಿವರ್ಸ್ ಆಪರೇಷನ್ ಮಾಡುತ್ತಿದೆ ಎನ್ನಲಾಗಿದೆ.
ಕಾಂಗ್ರೆಸ್ ಮಾತ್ರ ತನ್ನ ಸರ್ಕಾರ ಸೇಫ್ ಆಗಿದ್ದು, ಯಾವುದೇ ಸಂಕಷ್ಟ ಎದುರಾಗಿಲ್ಲ ಎಂದು ಹೇಳಿಕೊಂಡಿದೆ. ಅಲ್ಲದೆ ಕಾಂಗ್ರೆಸ್ ನಾಯಕಿ ಶೋಭಾ ಓಜಾ, ಬಿಜೆಪಿಯ ಕೆಲ ಶಾಸಕರೇ ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಬಾಂಬ್ ಸಿಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ನಾವು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಸಿದ್ಧರಿದ್ದೇವೆ. ಕೆಲವು ಶಾಸಕರನ್ನು ಬೆಂಗಳೂರಿಗೆ ಕರೆದೊಯ್ದು ಬಲವಂತವಾಗಿ ಇರಿಸಿಕೊಳ್ಳಲಾಗಿದೆ. ಆದ್ರೆ ನಾವು ಅವರೊಂದಿಗೆ ನಿರಂತರ ಸಂಪರ್ಕ ಹೊಂದಿದ್ದೇವೆ. ಅಷ್ಟೇ ಯಾಕೆ ಬಿಜೆಪಿಯ ಕೆಲ ಶಾಸಕರು ಕೂಡ ನಮ್ಮ ಸಂಪರ್ಕದಲ್ಲಿದ್ದಾರೆ ಎಂದಿದ್ದಾರೆ.
ಇದ್ರಿಂದ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ರಿವರ್ಸ್ ಆಪರೇಷನ್ ಮಾಡುತ್ತಾ ಅನ್ನೋ ಕುತೂಹಲ ಶುರುವಾಗಿದೆ.