ADVERTISEMENT
Friday, March 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

Shwetha by Shwetha
March 27, 2026
in ದೇಶ - ವಿದೇಶ, National, Newsbeat
Share on FacebookShare on TwitterShare on WhatsappShare on Telegram

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯ ಮತ್ತು ರಾಜತಾಂತ್ರಿಕ ವೈಫಲ್ಯಗಳಿಂದಾಗಿ, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಅಸ್ಥಿರವಾಗಿದ್ದ ಪಾಕಿಸ್ತಾನವು ಇಂದು ಜಾಗತಿಕ ಮಟ್ಟದಲ್ಲಿ ಮಧ್ಯವರ್ತಿ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ. ಬ್ರೋಕನ್ ಅಂದರೆ ಮುರಿದು ಬಿದ್ದಿದ್ದ ದೇಶವೊಂದನ್ನು ಬ್ರೋಕರ್ ಅಂದರೆ ದಲ್ಲಾಳಿ ಅಥವಾ ಸಂಧಾನಕಾರನನ್ನಾಗಿ ಪರಿವರ್ತಿಸಿದ್ದು ಮೋದಿ ಅವರ ಸಾಧನೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ವ್ಯಂಗ್ಯವಾಡಿದ್ದಾರೆ.

ವಿದೇಶಾಂಗ ಸಚಿವರಿಗೆ ತಿರುಗೇಟು

Related posts

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

March 27, 2026
ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

March 27, 2026

ಇತ್ತೀಚೆಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು, ಪಾಕಿಸ್ತಾನದಂತೆ ನಮ್ಮದು ದಲ್ಲಾಳಿ ದೇಶವಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಜೈರಾಮ್ ರಮೇಶ್, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸಲು ಪಾಕಿಸ್ತಾನವು ಈಗ ಪ್ರಮುಖ ಸಂಧಾನಕಾರನಾಗಿ ಹೊರಹೊಮ್ಮುತ್ತಿದೆ. ಇದು ಭಾರತದ ಪ್ರಾದೇಶಿಕ ರಾಜತಾಂತ್ರಿಕತೆಗೆ ಉಂಟಾದ ಅತಿದೊಡ್ಡ ಹಿನ್ನಡೆಯಾಗಿದೆ. ಈ ಸತ್ಯವನ್ನು ಅರಿತಿರುವ ಜೈಶಂಕರ್ ಅವರು, ಭಾರತಕ್ಕೆ ಉಂಟಾಗಿರುವ ಈ ತೀವ್ರ ಮುಜುಗರವನ್ನು ಮುಚ್ಚಿಹಾಕಲು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ವಿಶ್ವಗುರುವಿನ ವಿಶಿಷ್ಟ ಕೊಡುಗೆ

ಪ್ರಧಾನಿ ಮೋದಿ ಅವರ ರಾಜತಾಂತ್ರಿಕತೆಯು ಕೇವಲ ಪ್ರಚಾರ ಮತ್ತು ಆಡಂಬರದಿಂದ ಕೂಡಿದೆಯೇ ಹೊರತು ವಾಸ್ತವದಲ್ಲಿ ಅದು ಹೇಡಿತನದಿಂದ ಕೂಡಿದೆ. ಇದಕ್ಕೆ ಸಾಕ್ಷಿಯೇ ಪಾಕಿಸ್ತಾನವು ಇಂದು ಮಧ್ಯವರ್ತಿ ಪಾತ್ರವನ್ನು ಪಡೆಯುತ್ತಿರುವುದು. ನಮ್ಮ ರಾಜತಾಂತ್ರಿಕ ವೈಫಲ್ಯಗಳು ಒಂದು ಅಸ್ಥಿರ ದೇಶವನ್ನು ಬ್ರೋಕರ್ ದೇಶವನ್ನಾಗಿ ಮಾಡಿದೆ. ಇದು ಸ್ವಯಂ ಘೋಷಿತ ವಿಶ್ವಗುರುಗಳು ದೇಶಕ್ಕೆ ನೀಡಿದ ವಿಶಿಷ್ಟ ಕೊಡುಗೆಯಾಗಿದೆ. ವಿದೇಶಾಂಗ ಸಚಿವರು ಎಷ್ಟೇ ಸಮರ್ಥನೆ ಮಾಡಿಕೊಂಡರೂ ಈ ಕಟುಸತ್ಯವನ್ನು ಅಳಿಸಲು ಸಾಧ್ಯವಿಲ್ಲ ಎಂದು ರಮೇಶ್ ಟೀಕಿಸಿದ್ದಾರೆ.

ಶಾಂತಿ ಮಾತುಕತೆಗೆ ಅಥವಾ ಸಂಧಾನಕ್ಕೆ ಪಾಕಿಸ್ತಾನ ಯೋಗ್ಯವೆಂದು ಪರಿಗಣಿಸುತ್ತಿರುವುದು ನಿಜಕ್ಕೂ ಅತಿರೇಕದ ಸಂಗತಿ. ಕಳೆದ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಭಾರತ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಭಯೋತ್ಪಾದನೆಯನ್ನು ಪ್ರಾಯೋಜಿಸಿದ ಕುಖ್ಯಾತಿ ಪಾಕಿಸ್ತಾನಕ್ಕಿದೆ. ಒಸಾಮಾ ಬಿನ್ ಲಾಡೆನ್ ನಂತಹ ಜಾಗತಿಕ ಭಯೋತ್ಪಾದಕರಿಗೆ ದಶಕಗಳ ಕಾಲ ಆಶ್ರಯ ನೀಡಿದ ಹಾಗೂ ಪರಮಾಣು ಪ್ರಸರಣ ರಹಿತ ಕಾನೂನುಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಪರಮಾಣು ತಂತ್ರಜ್ಞಾನ ಹಂಚಿದ ದೇಶವೊಂದು ಇಂದು ಶಾಂತಿಧೂತನಾಗಲು ಹೊರಟಿರುವುದು ವಿಪರ್ಯಾಸ ಎಂದು ಕಾಂಗ್ರೆಸ್ ಹೇಳಿದೆ.

ಮನಮೋಹನ್ ಸಿಂಗ್ ವರ್ಸಸ್ ಮೋದಿ ಸರ್ಕಾರ

ಈ ಸಂದರ್ಭದಲ್ಲಿ ಕಾಂಗ್ರೆಸ್, ಯುಪಿಎ ಅವಧಿಯ ರಾಜತಾಂತ್ರಿಕತೆಯನ್ನು ಸ್ಮರಿಸಿದೆ. ಮುಂಬೈನಲ್ಲಿ 26/11ರ ಭಯೋತ್ಪಾದನಾ ದಾಳಿ ನಡೆದಾಗ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರ ಸರ್ಕಾರವು ಪಾಕಿಸ್ತಾನದ ದುಷ್ಕೃತ್ಯಗಳನ್ನು ಜಗತ್ತಿಗೆ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗಿತ್ತು. ಆ ಮೂಲಕ ಪಾಕಿಸ್ತಾನವನ್ನು ಜಾಗತಿಕವಾಗಿ ಏಕಾಂಗಿಯನ್ನಾಗಿ ಮಾಡಿತ್ತು. ಆದರೆ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದನಾ ದಾಳಿಯ ನಂತರ ಅಂತರರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನವನ್ನು ಒಂಟಿಯಾಗಿಸಲು ಮೋದಿ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಬದಲಾಗಿ ಪಾಕ್ ಸೇನಾ ಮುಖ್ಯಸ್ಥ ಅಸಿಂ ಮುನೀರ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತವಲಯದಲ್ಲಿ ಗುರುತಿಸಿಕೊಳ್ಳುವಂತಾಗಿದೆ ಎಂದು ಜೈರಾಮ್ ರಮೇಶ್ ಬೇಸರ ವ್ಯಕ್ತಪಡಿಸಿದ್ದಾರೆ.

ರಷ್ಯಾ ಉಕ್ರೇನ್ ಯುದ್ಧದಲ್ಲಿ ಭಾರತ ಬ್ರೋಕರ್ ಆಗಿತ್ತೇ

ಇದೇ ವೇಳೆ ಜೈಶಂಕರ್ ಅವರ ದಲ್ಲಾಳಿ ದೇಶ ಹೇಳಿಕೆಗೆ ಕಾಂಗ್ರೆಸ್ ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಕೂಡ ತಿರುಗೇಟು ನೀಡಿದ್ದಾರೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಲ್ಲಿ ಮಧ್ಯಸ್ಥಿಕೆ ವಹಿಸಲು ಪ್ರಧಾನಿ ಮೋದಿ ಅವರು ಹಪಹಪಿಸುತ್ತಿದ್ದಾಗ ಭಾರತವು ಬ್ರೋಕರ್ ದೇಶ ಆಗಿತ್ತೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಇದು ನಿಮ್ಮ ಆಯ್ದ ಮಧ್ಯಸ್ಥಿಕೆಯೇ ಅಥವಾ ಆಯ್ದ ನೆನಪಿನ ಶಕ್ತಿಯೇ ಎಂದು ಅವರು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಒಟ್ಟಾರೆಯಾಗಿ, ಜಾಗತಿಕ ಮಟ್ಟದಲ್ಲಿ ಭಾರತದ ಪ್ರಭಾವ ತಗ್ಗುತಿದ್ದು, ಅಸ್ಥಿರವಾಗಿದ್ದ ಪಾಕಿಸ್ತಾನವು ಅಮೆರಿಕದ ನೆರವಿನೊಂದಿಗೆ ಪ್ರಮುಖ ರಾಜತಾಂತ್ರಿಕ ಪಾತ್ರವನ್ನು ವಹಿಸಿಕೊಳ್ಳುತ್ತಿರುವುದು ಮೋದಿ ಸರ್ಕಾರದ ವೈಫಲ್ಯ ಎಂದು ಕಾಂಗ್ರೆಸ್ ಬಣ್ಣಿಸಿದೆ.

ShareTweetSendShare
Join us on:

Related Posts

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

by Shwetha
March 27, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿಗಳ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಇರಾನ್–ಅಮೆರಿಕ ಹಾಗೂ ಇಸ್ರೇಲ್ ನಡುವಿನ ಯುದ್ಧದ...

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

by Shwetha
March 27, 2026
0

ರಾಜ್ಯದಲ್ಲಿ ವಾಹನ ನೋಂದಣಿ ತೆರಿಗೆಯನ್ನು ಇಳಿಸುವ ಮಹತ್ವದ ತಿದ್ದುಪಡಿ ವಿಧೇಯಕ ಅಂಗೀಕರಿಸಲಾಗಿದೆ. ಈ ಮೂಲಕ 2026-27ನೇ ಸಾಲಿನಲ್ಲಿ ಹೊಸ ವಾಹನಗಳ ನೋಂದಣಿಯಿಂದ ಸುಮಾರು ₹250 ಕೋಟಿ ಆದಾಯ...

ವಿಧಾನಸೌಧದಲ್ಲಿ ಐಪಿಎಲ್ ಗದ್ದಲ: ನಾವು ವಿಐಪಿಗಳು, ಕ್ಯೂನಲ್ಲಿ ನಿಲ್ಲಲ್ಲ! ಆರ್​ಸಿಬಿ ಟಿಕೆಟ್​ಗಾಗಿ ಪಟ್ಟು ಹಿಡಿದ ಶಾಸಕರು

ವಿಧಾನಸೌಧದಲ್ಲಿ ಐಪಿಎಲ್ ಗದ್ದಲ: ನಾವು ವಿಐಪಿಗಳು, ಕ್ಯೂನಲ್ಲಿ ನಿಲ್ಲಲ್ಲ! ಆರ್​ಸಿಬಿ ಟಿಕೆಟ್​ಗಾಗಿ ಪಟ್ಟು ಹಿಡಿದ ಶಾಸಕರು

by Shwetha
March 27, 2026
0

ಬೆಂಗಳೂರು: ರಾಜ್ಯದಲ್ಲಿ ಐಪಿಎಲ್ ಕ್ರಿಕೆಟ್ ಜ್ವರ ತಾರಕಕ್ಕೇರಿದ್ದು, ಈ ಬಿಸಿಯು ಈಗ ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧಕ್ಕೂ ವ್ಯಾಪಿಸಿದೆ. ಅಭಿಮಾನಿಗಳು ಟಿಕೆಟ್‌ಗಾಗಿ ಕ್ರೀಡಾಂಗಣದ ಹೊರಗೆ ಮತ್ತು ಆನ್‌ಲೈನ್‌ನಲ್ಲಿ...

ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

by Shwetha
March 27, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ರಾಜಕೀಯ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ದಶಕಗಳಿಂದ ಶಾಮನೂರು ಕುಟುಂಬದ ಭದ್ರಕೋಟೆಯಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈಗ ಬಂಡಾಯದ ಬಿರುಗಾಳಿ ಎದ್ದಿದೆ....

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

by Shwetha
March 27, 2026
0

ಸಮಾಜದ ಆಗುಹೋಗುಗಳ ಬಗ್ಗೆ ಸದಾ ನಿರ್ಭೀತಿಯಿಂದ ದನಿ ಎತ್ತುತ್ತಾ, ಕಳೆದ ದಶಕದಿಂದ ಬಲಪಂಥೀಯ ವಿಚಾರಧಾರೆಗಳ ವಿರುದ್ಧ ಸಮರ ಸಾರಿರುವ ಬಹುಭಾಷಾ ನಟ ಕಿಶೋರ್, ಇದೀಗ ಮತ್ತೊಮ್ಮೆ ಕೇಂದ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram