ಮೈಸೂರು: ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಜಮೀನ್ದಾರಿ ಪದ್ಧತಿಯನ್ನು ಮತ್ತೆ ತರಲು ಸರ್ಕಾರ ಮುಂದಾಗಿದೆ. ಈ ಕಾಯ್ದೆ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ರಾಜ್ಯವ್ಯಾಪಿ ಹೋರಾಟ ಮಾಡಲಾಗುವುದು ಎಂದು ಮಾಜಿ ಸಂಸದ ಆರ್. ಧ್ರುವನಾರಾಯಣ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.
ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಜಾರಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬಡವರ ಭೂಮಿಗಾಗಿ ಶಿಕಾರಿಪುರದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಮಾಡಿದ್ದರು. ಆದರೆ ಈಗ ಅದೇ ಯಡಿಯೂರಪ್ಪನವರು ಸಿಎಂ ಆಗಿದ್ದರೂ ಒತ್ತಡಗಳಿಗೆ ಮಣಿಯುತ್ತಿದ್ದಾರೆ ಎಂದು ಟೀಕಿಸಿದರು.
ದೇವರಾಜ ಅರಸು ಅವರು ರೈತರಿಗೆ ಅನುಕೂಲವಾಗಲೆಂದು ಭೂ ಸುಧಾರಣೆ ಕಾಯ್ದೆ ತಂದರು. ಆದರೆ, ಯಡಿಯೂರಪ್ಪನವರು ರೈತರಿಗೆ ಸಂಕಷ್ಟ ತಂದಿಡಲು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದ್ದಾರೆ. ಈ ಕಾಯ್ದೆ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ರಾಜ್ಯವ್ಯಾಪಿ ಹೋರಾಟ ಮಾಡಲಾಗುವುದು ಎಂದು ಧ್ರುವ ನಾರಾಯಣ ಎಚ್ಚರಿಸಿದರು.








