ಬೆಂಗಳೂರು : ಎಪಿಎಂಸಿ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಕಾಂಗ್ರೆಸ್ ಪಕ್ಷದ ಸಂಪೂರ್ಣ ಬೆಂಬಲ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ‘ರೈತರ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲ ರೀತಿಯ ಹೋರಾಟಕ್ಕೆ ಬೆಂಬಲ ನೀಡುತ್ತದೆ.
ನಮ್ಮದು ರಾಷ್ಟ್ರೀಯ ಪಕ್ಷವಾದ್ದರಿಂದ ರೈತರ ಹೋರಾಟಕ್ಕೆ ಕೇವಲ ನಮ್ಮ ರಾಜ್ಯದಲ್ಲಿ ಮಾತ್ರ ಬೆಂಬಲ ಸೂಚಿಸಲು ಸಾಧ್ಯವಿಲ್ಲ.
ಚಪ್ಪಾಳೆ ಬೇಡ, ಸರ್ಕಾರ ಸೌಲಭ್ಯ ಕೊಡಿ : ಆರೋಗ್ಯ ಸಹಾಯಕರ ಪ್ರತಿಭಟನೆ
ಇಡೀ ರಾಷ್ಟ್ರದಲ್ಲೇ ಬೆಂಬಲ ನೀಡಬೇಕು. ಹೀಗಾಗಿ ನಮ್ಮ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಈ ಬಗ್ಗೆ ಮಾತನಾಡಲಿದ್ದಾರೆ ಎಂದು ತಿಳಿಸಿದರು.
ಇದೇ ವೇಳೆ ನಿನ್ನೆ ಸದನದಲ್ಲಿ ಸಿದ್ದರಾಮಯ್ಯ-ಬಿಎಸ್ ವೈ ನಡುವಿನ ಜಟಾಪಟಿ ಬಗ್ಗೆ ಮಾತನಾಡಿದ ಅವರು, ನಿನ್ನೆ ಸದನದಲ್ಲಿ ಸವಾಲು ಪ್ರತಿ ಸವಾಲುಗಳು ನೋಡಿದ್ದೇವೆ. ಮುಂದಿನ ನಡೆ ಬಗ್ಗೆ ಎಲ್ಲರೂ ಕೂತು ಚರ್ಚೆ ಮಾಡುತ್ತೇವೆ’ ಎಂದರು.








