Congress : ನಾವು ಮಾಡಿದ ಅಡುಗೆಯನ್ನು ಬಡಿಸಿದವರು ಬಿಜೆಪಿ : ಸಿದ್ದರಾಮಯ್ಯ
ಹುಬ್ಬಳ್ಳಿ : ನಾವು ಮಾಡಿರುವ ಅಡುಗೆಯನ್ನ ಬಿಜೆಪಿಗರು ಬಿಡಿಸುತ್ತಿದ್ದಾರೆಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.. ತಾಂಡಾ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆಗೆ ಬೇಕಾದ ಎಲ್ಲಾ ಕೆಲಸವನ್ನು ಮಾಡಿದ್ದು ಕಾಂಗ್ರೆಸ್. ಆದರೆ, ಬಿಜೆಪಿಯವರು ಎಲ್ಲವನ್ನೂ ನಾವೇ ಮಾಡಿದ್ದು ಎಂದು ಹೇಳಿಕೊಳ್ಳುತ್ತಿದ್ದಾರೆ. ನಾವು ಮಾಡಿದ ಅಡುಗೆಯನ್ನು ಬಡಿಸಿರುವ ಅವರು, ಅದನ್ನು ತಯಾರಿಸಿದ್ದು ಕೂಡ ನಾವೇ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ರಾಜ್ಯ ಬಿಜೆಪಿಯವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುಳ್ಳು ಹೇಳಿ ಹಕ್ಕುಪತ್ರ ವಿತರಣೆಗೆ ಕರೆಸಿದ್ದಾರೆ. ತಾವೇ ಕಾಯ್ದೆ ಮಾಡಿ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿದ್ದೇವೆ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ.. 1992ರಲ್ಲಿ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಮಾಡಲು ಮಲ್ಲಿಕಾರ್ಜುನ ಖರ್ಗೆ ಅವರು ಪ್ರಯತ್ನಿಸಿದ್ದರು. ನಮ್ಮ ಸರ್ಕಾರಲ್ಲಿ ಕಂದಾಯ ಸಚಿವರಾಗಿದ್ದ ಕಾಗೋಡು ತಿಮ್ಮಪ್ಪ ಅವರು.
ಕಂದಾಯ ಗ್ರಾಮ ಮತ್ತು ಅರಣ್ಯ ಕಾಯ್ದೆಗೆ ತಿದ್ದುಪಡಿ ತಂದುಉಳುವವನೇ ಭೂಮಿ ಒಡೆಯ ಮಾದರಿಯಲ್ಲಿ ವಾಸಿಸುವವನೇ ಮನೆಯೊಡೆಯ ಕಾಯ್ದೆ ಜಾರಿಗೆ ತಂದಿದ್ದರು ಎಂದು ಹೇಳಿದ್ದಾರೆ. ಅದಕ್ಕೂ ಮುನ್ನ ನರಸಿಂಹಯ್ಯ ಎಂಬುವರ ಅಧ್ಯಕ್ಷತೆಯಲ್ಲಿ ತಾಂಡಾ, ಹಟ್ಟಿಗಳು, ಕುರುಬರ ಹಟ್ಟಿ, ನಾಯಕರ ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವುದರ ಕುರಿತು ಅಧ್ಯಯನಕ್ಕೆ ಸಮಿತಿ ರಚಿಸಿದ್ದೆ. ನಂತರ ಹೀರಾನಾಯ್ಕ ಎಂಬುವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿದ್ದೆವು. ಅದರ ಫಲವಾಗಿ ಇಂದು ಅವರಿಗೆ ಹಕ್ಕುಪತ್ರ ಸಿಗುತ್ತಿದೆ.
ಬಿಜೆಪಿಯವರು ಚುನಾವಣೆ ಬಂದಾಗ, ಎಲ್ಲವನ್ನೂ ನಾವೇ ಮಾಡಿದ್ದು ನಾವೇ ಎಂದು ಹೇಳುತ್ತಿದ್ದಾರೆ. ನಾವು ಈ ಎಲ್ಲಾ ಕೆಲಸಗಳನ್ನು ಮಾಡಿದ ಬಳಿಕ, ಇವರು ಮೋದಿ ಅವರನ್ನು ಕರೆಸಿ ಹಕ್ಕುಪತ್ರ ವಿತರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
Congress : The one who served us the food BJP : Siddaramaiah








