ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ : ಯತೀಂದ್ರ

1 min read
Yathindra Siddaramaiah

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ : ಯತೀಂದ್ರ

ಮೈಸೂರು : ಹಾನಗಲ್‍ನಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ, ಸಿಂದಗಿಯಲ್ಲಿ ಸೋತು ಗೆದ್ದಿದ್ದೇವೆ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಉಪಚುನಾವಣೆಯ ಫಲಿತಾಂಶದ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಸಿಂದಗಿ, ಹಾನಗಲ್ ಎರಡು ಕ್ಷೇತ್ರಗಳಲ್ಲೂ ಗೆಲ್ಲುವ ನಿರೀಕ್ಷೆ ಇತ್ತು. ಆದರೂ ಹಾನಗಲ್‍ನಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಸಿಂದಗಿಯಲ್ಲಿ ಕಳೆದ ಬಾರಿ ಕಾಂಗ್ರೆಸ್ ಪಕ್ಷ ಮೂರನೇ ಸ್ಥಾನಕ್ಕೆ ಬಂದಿತ್ತು. ಅಲ್ಲಿ ಜೆಡಿಎಸ್ ಪಕ್ಷ ಗೆಲುವು ಸಾಧಿಸಿತ್ತು. ಆದರೆ ಈ ಬಾರಿ ಮೂರನೇ ಸ್ಥಾನದಲ್ಲಿದ್ದ ಕಾಂಗ್ರೆಸ್ ಪಕ್ಷ ಎರಡನೇ ಸ್ಥಾನಕ್ಕೆ ಬಂದಿದೆ. ಆ ಕ್ಷೇತ್ರದ ಮತದಾರರು ಸಹ ಬದಲಾವಣೆ ಬಯಸಿದ್ದಾರೆ ಎಂದು ಹೇಳಿದ್ದಾರೆ.

Congress saaksha tv

ಇನ್ನು ಮುಂದಿನ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನತೆಯ ಒಲವು ವ್ಯಕ್ತಪಡಿಸಿದ್ದಾರೆ.
ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಖಂಡರು ಹಗಲು ರಾತ್ರಿ ಶ್ರಮವಹಿಸಿದ್ದಾರೆ. ಈ ಗೆಲುವಿನ ಕೀರ್ತಿ ಕ್ಷೇತ್ರದ ಜನತೆ ಹಾಗೂ ಕಾರ್ಯಕರ್ತರುಗಳಿಗೆ ಸಲ್ಲಬೇಕು. ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳಿಂದ ಜನತೆ ಬದಲಾವಣೆ ಬಯಸಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd