#ತಿಂಗಳುಆರು_Onlyದೆಹಲಿಟೂರು : ಬೊಮ್ಮಾಯಿಗೆ ಪ್ರಶ್ನೆಗಳ ಸುರಿಮಳೆ
ಬೆಂಗಳೂರು : ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಇಂದಿನ ಆರು ತಿಂಗಳು ಪೂರೈಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಟ್ವಿಟ್ಟರ್ ನಲ್ಲಿ ಸರಣಿ ಪ್ರಶ್ನೆಗಳು ಕೇಳಿದೆ. ಅಲ್ಲದೆ #ತಿಂಗಳುಆರು_Onlyದೆಹಲಿಟೂರು ಎಂದು ಹ್ಯಾಷ್ ಟ್ಯಾಗ್ ಬಳಸಿ ಕುಟುಕಿದೆ.
ಕಾಂಗ್ರೆಸ್ ಟ್ವೀಟ್ ನಲ್ಲಿ… Congress tweet on Karnataka cm Basavaraja bommai
ನೋಟ್ ಬ್ಯಾನ್ ಹಾಗೂ ಗಬ್ಬರ್ ಸಿಂಗ್ ಟ್ಯಾಕ್ಸ್ಗಳಿಂದಾಗಿ ಶುರುವಾದ ನಿರುದ್ಯೋಗ ಸಮಸ್ಯೆ ಲಾಕ್ಡೌನ್ ನಂತರ ಉತ್ತುಂಗಕ್ಕೇರಿದೆ. ಸಿಎಂ ಆಗಿ ಅರ್ಧ ವರ್ಷ ಅಧಿಕಾರ ಪೂರೈಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಉದ್ಯೋಗ ಸೃಷ್ಟಿಗೆ ತಾವು ಕೈಗೊಂಡ ಕ್ರಮಗಳೇನು? ರೂಪಿಸಿದ ಯೋಜನೆಗಳೇನು? ಎಷ್ಟು ಉದ್ಯೋಗ ಸೃಷ್ಟಿಯಾಗಿದೆ ಎಂದು ಕೇಳಿದೆ.
ಮುಖ್ಯಮಂತ್ರಿಯಾಗಿ ಹಣಕಾಸು ಖಾತೆಯನ್ನು ಖಾತೆಯನ್ನು ನಿಭಾಯಿಸುತ್ತಿರುವ ಬಸವರಾಜ ಬೊಮ್ಮಾಯಿ ಅವರೇ, ತಮ್ಮ ಅಧಿಕಾರದ 6 ತಿಂಗಳಲ್ಲಿ ಹಾಗೂ ನಿಮ್ಮ ಡಬಲ್ ಇಂಜಿನ್ ಸರ್ಕಾರದಲ್ಲಿ ಕೇಂದ್ರದಿಂದ ಯಾವ್ಯಾವ ಯೋಜನೆಗೆ ಎಷ್ಟು ಅನುದಾನ ತಂದಿದ್ದೀರಿ? GST ಬಾಕಿ, ನೆರೆ ಪರಿಹಾರ ಸೇರಿದಂತೆ ಎಷ್ಟು ನೆರವನ್ನು ತಂದಿದ್ದೀರಿ?
ಬಿಬಿಎಂಪಿಯಲ್ಲಿ ಭ್ರಷ್ಟಾಚಾರ, ಬಿಡಿಎಯಲ್ಲಿ ಭ್ರಷ್ಟಾಚಾರ, ನೇಮಕಾತಿಯಲ್ಲಿ ಭ್ರಷ್ಟಾಚಾರ, ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಗುತ್ತಿಗೆಯಲ್ಲಿ 40% ಕಮಿಷನ್ ಭ್ರಷ್ಟಾಚಾರ. ಈ ಸರ್ಕಾರದಲ್ಲಿ ಎಲ್ಲೆಲ್ಲೂ ಭ್ರಷ್ಟಾಚಾರವೇ. ಬೊಮ್ಮಾಯಿ ಅವರೇ, ಈ 6 ತಿಂಗಳಲ್ಲಿ ಭ್ರಷ್ಟಾಚಾರ ನಿಗ್ರಹಕ್ಕೆ ಕೈಗೊಂಡ ಕ್ರಮಗಳೇನು?
ಸಿಗದ ನೆರೆ ಪರಿಹಾರ, ದೊರಕದ ಕರೋನಾ ಪರಿಹಾರ, ಕುಂಟುವ ಅಡಳಿತಯಂತ್ರ, ಇಲ್ಲದ ವಸತಿ ಯೋಜನೆಗಳು. ಜನರ ಸಮಸ್ಯೆ ಹಲವಾರಿದ್ದರೂ ಒಂದೇ ಒಂದು ಜನತಾ ದರ್ಶನ ಕಾರ್ಯಕ್ರಮ ಮಾಡಿಲ್ಲವೇಕೆ? ಉಪಯೋಗವಿಲ್ಲದ ದೆಹಲಿ ದರ್ಶನಕ್ಕೆ ಹೋಗುವ ತಮಗೆ ಜನತಾದರ್ಶನಕ್ಕೆ ಸಮಯವಿರಲಿಲ್ಲವೇ ಎಂದು ಪ್ರಶ್ನಿಸಿದೆ.