Congress Tweet | ರಾಜ್ಯಕ್ಕೆ ಸಂಕಟ, ಬಿಜೆಪಿಗೆ ಅಧಿಕಾರದಾಟ
ಬೆಂಗಳೂರು : ರಾಜ್ಯ ಸಂಕಷ್ಟಕ್ಕೆ ಎದುರಾದಾಗಲೆಲ್ಲ ಬಿಜೆಪಿ ರಾಜಕೀಯದಾಟಕ್ಕೆ ಚಾಲನೆ ಕೊಡುತ್ತದೆ ಎಂದು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ.
ಸಿಎಂ ಬದಲಾವಣೆ ಬಗ್ಗೆ ಬಿಜೆಪಿ ಮುಖಂಡರೇ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿರುವ ಕಾಂಗ್ರೆಸ್, ರಾಜ್ಯಕ್ಕೆ ಸಂಕಟ, ಬಿಜೆಪಿಗೆ ಅಧಿಕಾರದಾಟ. ಅತಿವೃಷ್ಟಿಯಿಂದ ಜನತೆ ಪರದಾಡುತ್ತಿರುವಾಗ ಸಮರೋಪಾಧಿಯಲ್ಲಿ ನೆರವಿನ ಕಾರ್ಯ ಮಾಡುವುದನ್ನು ಬಿಟ್ಟು ಬಿಜೆಪಿ 3ನೇ ಸಿಎಂ ಪ್ರತಿಷ್ಠಾಪನೆಗೆ ಕಸರತ್ತು ನಡೆಸುತ್ತಿದೆ. ರಾಜ್ಯ ಸಂಕಷ್ಟಕ್ಕೆ ಎದುರಾದಾಗಲೆಲ್ಲ ಬಿಜೆಪಿ ರಾಜಕೀಯದಾಟಕ್ಕೆ ಚಾಲನೆ ಕೊಡುತ್ತದೆ ಎಂದು ಕುಟುಕಿದೆ.
ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ ! 40% ಸರ್ಕಾರದಲ್ಲಿ ‘3ನೇ ಸಿಎಂ’ ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ ! #PuppetCM ಬಸವರಾಜ ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ. ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡದಿರುವುದು, ಸಂಭ್ರಮವಿಲ್ಲದಿರುವುದೇ ಇದಕ್ಕೆ ನಿದರ್ಶನ.
ರಾಜ್ಯಕ್ಕೆ ಸಂಕಟ, ಬಿಜೆಪಿಗೆ ಅಧಿಕಾರದಾಟ.
ಅತಿವೃಷ್ಟಿಯಿಂದ ಜನತೆ ಪರದಾಡುತ್ತಿರುವಾಗ ಸಮರೋಪಾಧಿಯಲ್ಲಿ ನೆರವಿನ ಕಾರ್ಯ ಮಾಡುವುದನ್ನು ಬಿಟ್ಟು @BJP4Karnataka ಪಕ್ಷ 3ನೇ ಸಿಎಂ ಪ್ರತಿಷ್ಠಾಪನೆಗೆ ಕಸರತ್ತು ನಡೆಸುತ್ತಿದೆ.
ರಾಜ್ಯ ಸಂಕಷ್ಟಕ್ಕೆ ಎದುರಾದಾಗಲೆಲ್ಲ ಬಿಜೆಪಿ ರಾಜಕೀಯದಾಟಕ್ಕೆ ಚಾಲನೆ ಕೊಡುತ್ತದೆ.#PuppetCM
— Karnataka Congress (@INCKarnataka) August 9, 2022
ಎಷ್ಟು ಪ್ರಯತ್ನಿಸಿದರೂ ಜನತಾ ಪರಿವಾರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರನ್ನ ಕೇಶವ ಕೃಪಾದವರು ‘ಸಂಘಪರಿವಾರಿ’ಯಾಗಿ ಸ್ವೀಕರಿಸಲು ಒಪ್ಪಲೇ ಇಲ್ಲ! ಆಡಿಸಿ ನೋಡು ಎಂದು ಗೊಂಬೆಯಂತಿದ್ದ #PuppetCM ಬೊಮ್ಮಾಯಿಯವರನ್ನು ಬೀಳಿಸಿ ನೋಡಲು ಹೊರಟಿದೆ ಹೈಕಮಾಂಡ್! ಈ ಬದಲಾವಣೆ ಯತ್ನ ಸರ್ಕಾರದ ವೈಫಲ್ಯಕ್ಕೋ, 3 ಸಿಎಂ ಎಂಬ ನಿಮ್ಮ ಸಂಪ್ರದಾಯಕ್ಕೋ ಬಿಜೆಪಿ.
ಬೊಮ್ಮಾಯಿಯವರೇ, ಸಿಎಂ ಹುದ್ದೆಗೆ ‘ಕತ್ತಿ ವರಸೆ’ ಶುರುವಾಗಿದೆ ಎಂದರೆ ನೀವು ಕುರ್ಚಿಯಿಂದ ಇಳಿಯಲು ದಿನಗಳನ್ನಲ್ಲ, ಗಂಟೆಗಳನ್ನು ಎಣಿಸುತ್ತಿದ್ದೀರಿ ಎನಿಸುತ್ತಿದೆ ! ಬಸವರಾಜ ಬೊಮ್ಮಾಯಿ ಅವರೇ, ಸಿಎಂ ಬದಲಾವಣೆ ಎಂಬ ಬೆಳವಣಿಗೆಗೆ ಕಾರಣವೇನು, ನಿಮ್ಮ ಆಡಳಿತ ವೈಫಲ್ಯವೇ? ಅಥವಾ #BJPvsBJP ಕಾದಾಟವೇ? ಅಥವಾ ಯಡಿಯೂರಪ್ಪನವರ ಕೋಪವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.








