ಉಡುಪಿ : ಕಾಂಗ್ರೆಸ್‌ನ ಹಿರಿಯ ಮುಖಂಡ ಕೆ. ಕೃಷ್ಣರಾಜ್ ಸರಳಾಯ(87) ಅವರು ಶನಿವಾರ ಮಧ್ಯಾಹ್ನ ವೇಳೆ ಪಣಿಯಾಡಿಯಲ್ಲಿರುವ ತಮ್ಮ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಬ್ಧ ಕೇಳಿದ ನೆರೆ ಮನೆಯವರು ಬಾವಿಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಅವರು ಹಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸರಳಾಯರು ಮನೆಯಲ್ಲಿ ಒಂಟಿ ಜೀವನ ನಡೆಸುತ್ತಿದ್ದರು. ಇದೇ ಕೊರಗಿನಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಹಿರಿಯ ಕಾಂಗ್ರೆಸ್ ಮುಖಂಡರಾಗಿದ್ದ ಸರಳಾಯರು 76 ಬಡಗಬೆಟ್ಟು ಬೈಲೂರು ಮಂಡಲ ಪ್ರಧಾನರಾಗಿದ್ದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಪಕ್ಷದಲ್ಲಿ ಸಕ್ರಿಯರಾಗಿದ್ದರು. ಸಹಕಾರಿ ಕ್ಷೇತ್ರದಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ ಸರಳಾಯರು ಕೊರಂಗ್ರಪಾಡಿ ವ್ಯವಸಾಯಿಕ ಸಹಕಾರಿ ಸಂಘ, ಉಡುಪಿ ಟೌನ್ ಕೋ ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಗುಜರಾತ್ ಜನರನ್ನು ಅನಕ್ಷರಸ್ಥರೆಂದು ಜರಿದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅನರ್ಹ, ಅಂಕಿ ಅಂಶಗಳ ಸಮೇತ ತಿರುಗೇಟು ನೀಡಿದ ಬಿಜೆಪಿ
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುಜರಾತ್ ಜನರ ಬಗ್ಗೆ ನೀಡಿರುವ ಹೇಳಿಕೆಯೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ರಾಜಕೀಯ ಬಿರುಗಾಳಿಯನ್ನೇ ಸೃಷ್ಟಿಸಿದೆ. ಕೇರಳದಲ್ಲಿ ನಡೆದ ಚುನಾವಣಾ...








