Congress vs BJP | ಹುಲಿಯಾ.. ಬಂಡೆ.. ಧೈರ್ಯಕ್ಕೆ `ಕೇಸರಿ’ ಸವಾಲು
ಬೆಂಗಳೂರು : ಕೆಲ ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂಬ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ರಾಜ್ಯ ಬಿಜೆಪಿ ಘಟಕ ಟ್ವಿಟ್ಟರ್ ನಲ್ಲಿ ಟಾಂಗ್ ನೀಡಿದೆ.
ಬಿಜೆಪಿಯ ಯಾವ್ಯಾವ ಸಚಿವರು ನಿತ್ಯ ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಸಂಪರ್ಕದಲ್ಲಿದ್ದಾರೆ ಎಂದು ಸಚಿವರನ್ನೇ ಕೇಳಿ. ಗೌಪ್ಯತೆ ಕಾಪಾಡುವುದು ರಾಜಕಾರಣದ ಒಂದು ಭಾಗ. ಹೀಗಾಗಿ ನಾನು ಯಾರ ಹೆಸರನ್ನೂ ಹೇಳೋದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೋಮವಾರ ಹೇಳಿಕೆ ನೀಡಿದ್ದರು.
ಇದಕ್ಕೆ ಇಂದು ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಸಿದ್ದರಾಮಯ್ಯ ಹಾಗೂ ಡಿಕೆಶಿ ಕತ್ತಲೆಯಲ್ಲಿ ಕಪ್ಪು ಬೆಕ್ಕು ಹುಡುಕುತ್ತಿದ್ದಾರೆ. ಬಿಜೆಪಿಯವರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಭ್ರಮೆ ಸೃಷ್ಟಿಸಿಕೊಳ್ಳುತ್ತಿದ್ದಾರೆ. ಈ ಇಬ್ಬರು ನಾಯಕರಿಗೆ ಧೈರ್ಯವಿದ್ದರೆ, ಅವರ ಸಂಪರ್ಕಕ್ಕೆ ಬಂದ ಒಬ್ಬ ಬಿಜೆಪಿ ಶಾಸಕನ ಹೆಸರನ್ನು ಬಹಿರಂಗಪಡಿಸಲಿ ಎಂದು ಸವಾಲಾಕಿದೆ.
ಸಿದ್ದರಾಮಯ್ಯನವರೇ, ನಿಮ್ಮ ಜೊತೆ ಯಾರಾದರೂ ಬಂದರೆ ಅದು ತತ್ವ ಸಿದ್ದಾಂತದ ನಂಬಿಕೆಯಿಂದಲ್ಲ. ಅದು ಅವಕಾಶವಾದ ಹಾಗೂ ಅಧಿಕಾರ ದಾಹಕ್ಕಾಗಿ ಮಾತ್ರ ಎಂದು ವ್ಯಂಗ್ಯವಾಡಿದೆ.