ದಾವಣಗೆರೆ : ರಾಜ್ಯದಲ್ಲಿ ಚುನಾವಣೆ ಮುಗಿದು ಫಲಿತಾಂಶವೂ ಬಂದಿದೆ. ಆದರೂ ಹಲವೆಡೆ ದ್ವೇಷದ ರಾಜಕಾರಣ ಬೆಳಕಿಗೆ ಬರುತ್ತಿದೆ. ಗೆದ್ದವರು ಹಾಗೂ ಸೋತ ನಾಯಕರು ಆರಾಮಾಗಿ ಇದ್ದರೂ ಅವರ ಬೆಂಬಲಿಗರ ಆಕ್ರೋಶ ಅಲ್ಲಲ್ಲಿ ಕಂಡು ಬರುತ್ತಿದೆ. ಸದ್ಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಎಂ.ಪಿ. ರೇಣುಕಾಚಾರ್ಯ ಅವರ ಬೆಂಬಲಗಿಂದ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಚಾಕುವಿನಿಂದ ದಾಳಿ ಮಾಡಿರುವ ಘಟನೆ ನಡೆದಿದೆ.
ಜಿಲ್ಲೆಯ ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರ ಮಧು(24) ಘಟನೆಯಲ್ಲಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತ ಪ್ರವೀಣ್, ಪ್ರಕಾಶ್ ಎಂಬುವವರ ವಿರುದ್ಧ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಹೊನ್ನಾಳಿ ಕ್ಷೇತ್ರದಲ್ಲಿ ಬಿಜೆಪಿಯ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರ ವಿರುದ್ಧ ಕಾಂಗ್ರೆಸ್ ನ ಶಾಂತನಗೌಡ ಗೆದ್ದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಪಟಾಕಿ ಹಚ್ಚಿ ಸಂಭ್ರಮಿಸುತ್ತಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆ. ಆಗ ರೇಣುಕಾಚಾರ್ಯ ಬೆಂಬಲಿಗರು, ಹಲ್ಲೆ ನಡೆಸಿದ್ದು ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಚಾಕು ಇರಿಯಲಾಗಿದೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








