ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋತ ಬಿಜೆಪಿ (BJP) ಆತ್ಮಾವಲೋಕನ ಸಭೆ ನಡೆಸಿದ್ದು, ಸೋಲಿಗೆ ಕಾಂಗ್ರೆಸ್ ನ ಗ್ಯಾರಂಟಿಗಳೇ ಕಾರಣ ಎಂದು ಹೇಳಿದೆ.
ಸಭೆಯಲ್ಲಿ ಹಲವರು ಸೋಲಿಗೆ ಗ್ಯಾರಂಟಿಗಳೇ ಕಾರಣ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಮ್ಮ ಪಕ್ಷದ ಪ್ರಣಾಳಿಕೆ ಕಾಂಗ್ರೆಸ್ ನ ಪ್ರಣಾಳಿಕೆಯಷ್ಟು ಉತ್ತಮವಾಗಿರಲಿಲ್ಲ. ಕಾಂಗ್ರೆಸ್ ನಾಯಕರು ಪ್ರಚಾರದ ಕಡೆ 5 ಗ್ಯಾರಂಟಿಗಳ ಬಗ್ಗೆಯೇ ಮಾತನಾಡುತ್ತಿದ್ದರು. ನಮ್ಮ ಭರವಸೆಗಳು ಜನರನ್ನು ತಲುಪುವಲ್ಲಿ ವಿಫಲವಾಗಿದ್ದು, ನಮ್ಮ ಸೋಲಿಗೆ ಕಾರಣವಾಯಿತು ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಡಾ.ಕೆ.ಸುಧಾಕರ್ ಅವರಿಗೆ ಪ್ರಣಾಳಿಕೆ ಹೊಣೆ ನೀಡಿದ್ದಕ್ಕೆ ಕೆಲವರ ಅಸಮಧಾನ ಹೊರಹಾಕಿದ್ದಾರೆ. ಸ್ಥಳೀಯ ಸಚಿವರನ್ನು ಬಿಟ್ಟು ಬೇರೆ ಜಿಲ್ಲೆಗಳಿಗೆ ಉಸ್ತುವಾರಿ ನೀಡಿದ್ದು ಸಹ ಚುನಾವಣೆ ಸೋಲಿಗೆ ಪ್ರಮುಖ ಕಾರಣವಾಗಿದೆ. ಸ್ಥಳೀಯ ಕ್ಷೇತ್ರಗಳಲ್ಲಿ ಸಚಿವರಾಗಿದ್ದಂತವರಿಗೆ ಮೂಲ ಜಿಲ್ಲೆಗಳ ಉಸ್ತುವಾರಿ ಕೊಡಬೇಕಿತ್ತು. ಇದು ಕೂಡ ಸೋಲಿಗೆ ಕಾರಣ ಎಂದು ಹಲವರು ಬೇಸರ ವ್ಯಕ್ತಪಡಿಸಿದ್ದಾರೆ.