ಬೆಂಗಳೂರಿನಲ್ಲಿ ಹೆಡ್ ಕಾನ್ಸ್ಟೇಬಲ್ ಸಾವನ್ನಪ್ಪಿದ ಪ್ರಕರಣವೊಂದು ಚಂದ್ರಾ ಲೇಔಟ್ ಠಾಣೆಯಲ್ಲಿ ಬೆಳಕಿಗೆ ಬಂದಿತ್ತು.
ಸದ್ಯ ಮರಣೋತ್ತರ ವರದಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ದೃಢಪಟ್ಟಿದೆ. ಹೆಡ್ ಕಾನ್ಸ್ ಟೇಬಲ್ ನವೀನ್ ಅವರು ಮದ್ಯದಲ್ಲಿ ವಿಷ ಮಿಶ್ರಣ ಮಡಿ ಕುಡಿದಿದ್ದಾರೆ ಎನ್ನಲಾಗಿದೆ.
ಸಾವನ್ನಪ್ಪಿದ ನವೀನ್ ಗೆ ಇದೇ ತಿಂಗಳು 26ಕ್ಕೆ ಎರಡನೇ ಮದುವೆ ನಿಗದಿಯಾಗಿತ್ತು. ಆದರೆ, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಾವನ್ನಪ್ಪಿದ ನವೀನ್ ಅವರು ವಿಜಯನಗರ ಸಂಚಾರ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅತ್ತಿಗುಪ್ಪೆ ಮನೆಯಲ್ಲಿ ವಾಸಿಸುತ್ತಿದ್ದರು. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಮದ್ಯ ಮತ್ತು ಕೂಲ್ ಡ್ರಿಂಕ್ ನಲ್ಲಿ ವಿಷ ಸೇವಿಸಿದ್ದಾರೆ. ಬೆಳಿಗ್ಗೆ ಕರೆ ಸ್ವೀಕರಿಸದಿದ್ದಾಗ ಮನೆಗೆ ಹೋಗಿ ಪರಿಶೀಲಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ಕುರಿತು ಚಂದ್ರಾ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








