ಬೆಂಗಳೂರು: ರಾಜ್ಯದ ಎಲ್ಲಾ ಶಾಲಾ ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಅವರಿಗೆ ಕೋವಿಡ್ ಲಸಿಕೆ ನೀಡಲು ಆದ್ಯತೆ ನೀಡಬೇಕೆಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಈ ಸಂಬಂಧ ಪ್ರಧಾನಿ ಮೋದಿ ಮತ್ತು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರಿಗೆ ಪ್ರತ್ಯೇಕ ಪತ್ರ ಬರೆದಿರುವ ಅವರು, ಕೋವಿಡ್ ವಾರಿಯರ್ಸ್ ಗೆ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡುತ್ತಿರುವುದು ಅತ್ಯಂತ ಸಮಂಜಸವಾದ ವಿಚಾರವಾಗಿದೆ. ಅದೇ ರೀತಿ ಶಿಕ್ಷಕರನ್ನೂ ಸಹ ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಅವರಿಗೂ ಲಸಿಕೆ ನೀಡಲು ಆದ್ಯತೆ ನೀಡಬೇಕೆಂದು ಮನವಿ ಮಾಡಿದ್ದಾರೆ.
ಈಗಾಗಲೇ ನಮ್ಮ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗುಹಾ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಶಿಕ್ಷಣ ಇಲಾಖೆ ನೌಕರರನ್ನೂ ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಲಸಿಕೆ ನೀಡಲು ಆದ್ಯತೆ ನೀಡಬೇಕೆಂದು ಕೋರಿದ್ದಾರೆಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಶಾಲಾ ಶಿಕ್ಷಕರು ಕೋವಿಡ್ ವಾರಿಯರ್ಸ್ ಆಗಿ ಕಂಟೈನ್ಮೆಂಟ್ ವಲಯಗಳಲ್ಲಿ ಕೆಲಸ ಮಾಡುವ ಮೂಲಕ ಕೋವಿಡ್ ತಡೆಯಲ್ಲಿ ಪ್ರಧಾನ ಪಾತ್ರ ವಹಿಸಿದ್ದಾರೆ. ಶಿಕ್ಷಕರು ಮನೆಮನೆಗೆ ಭೇಟಿ ನೀಡಿ ಅಂಕಿ ಅಂಶ ಸಂಗ್ರಹಣೆ, ಸಾಮಾಜಿಕ ಅಂತರದ ಮಹತ್ವದ ತಿಳಿವಳಿಕೆ ಮೂಡಿಸಿದ್ದಾರೆ. ಆರೋಗ್ಯ ಕಾರ್ಯಕರ್ತರಿಗೆ ಹೆಗಲೆಣೆಯಾಗಿ ದುಡಿದಿದ್ದಾರೆ.
ಈಗ ಶಾಲೆಗಳು ಆರಂಭವಾಗಿದ್ದು, ಅವರೆಲ್ಲ ತರಗತಿಗಳಲ್ಲಿ ಮಕ್ಕಳ ಸಮೂಹದ ಸಂಪರ್ಕಕ್ಕೆ ಬರುತ್ತಿರುವುದರಿಂದ ಮಕ್ಕಳ ಮತ್ತು ಅವರ ಹಿತದೃಷ್ಟಿಯಿಂದ ಶಿಕ್ಷಕರಿಗೆ ಲಸಿಕೆ ನೀಡುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಶಿಕ್ಷಕರು ವ್ಯಾಕ್ಸಿನ್ ಪಡೆಯಲು ಅನುವಾಗುವಂತೆ ಶಿಕ್ಷಕರನ್ನು ಕೋವಿಡ್-19 ವಾರಿಯರ್ಸ್ ಎಂದು ಪರಿಗಣಿಸಬೇಕೆಂದು ಕೋರಿ ನಮ್ಮ ರಾಜ್ಯದ ಮುಖ್ಯ ಕಾರ್ಯದರ್ಶಿ ಸಲ್ಲಿಸಿರುವ ಪ್ರಸ್ತಾವನೆಗೆ ಅನುಮೋದನೆ ನೀಡಬೇಕೆಂದು ಸುರೇಶ್ ಕುಮಾರ್ ಕೋರಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel