ದಾವಣಗೆರೆ: ಪಂಚಮಸಾಲಿ ಮೀಸಲಾತಿ (Panchamasali Reservation) ಹೋರಾಟಗಾರರ ಮೇಲೆ ಗೋಲಿ ಬಾರ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಯಮೃತ್ಯುಂಜಯ ಸ್ವಾಮೀಜಿಗಳನ್ನು (JayaMrityunjaya Swamiji ) ಮುಗಿಸಲು ಪ್ಲ್ಯಾನ್ ನಡೆದಿತ್ತು. ಅವರನ್ನು ಮುಗಿಸಿದರೆ ಹೋರಾಟ ನಿಲ್ಲುತ್ತದೆ ಎಂಬ ಕಾರಣಕ್ಕೆ ಗೋಲಿಬಾರ್ ಗೆ ಯತ್ನಿಸಲಾಗಿತ್ತು ಎಂದು ಗಂಭೀರ ಆರೋಪ ಮಾಡಲಾಗಿದೆ.
ಚನ್ನಮ್ಮ ವಂಶಸ್ಥರ ಮೇಲೆ ನಡೆದ ಲಾಠಿ ಚಾರ್ಜ್ ಮಾಡಲಾಗಿದೆ. ಆದರೆ, ಕಾಂಗ್ರೆಸ್ ನ ಯತ್ನ ವಿಫಲವಾಗುತ್ತದೆ. ನಾವು ಪಂಚಮಸಾಲಿ ಸಮುದಾಯದ ಜೊತೆ ಗಟ್ಟಿಯಾಗಿದ್ದೇವೆ. ಸಮುದಾಯದವರ ಮೇಲಿನ ದಾಳಿಯನ್ನು ಎಲ್ಲಾ ಮಠಾಧೀಶರು ಖಂಡಿಸಬೇಕು. ಮೀಸಲಾತಿ ಅವರ ಹಕ್ಕು, ಅದನ್ನು ಅವರು ಕೇಳುತಿದ್ದಾರೆ. ಇದಕ್ಕೆ ಲಾಠಿಯಿಂದ ಉತ್ತರಿಸಬಾರದು ಎದಿದ್ದಾರೆ.
ಹೋರಾಟದ ಬಗ್ಗೆ ಹಗುರವಾಗಿ ಮಾತನಾಡಿರುವ ಗೃಹ ಸಚಿವ ಜಿ.ಪರಮೇಶ್ವರ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು. ಲಾಠಿ ಚಾರ್ಜ್ ಮಾಡುವ ಬದಲು ಮುತ್ತು ಕೊಡಬೇಕಾ ಅಂತ ಕೇಳ್ತಾರೆ. ಮುತ್ತು ಕೊಡು ಎಂದು ಕೇಳಿದ್ದಾರಾ? ಹೋರಾಟಗಾರರು ಇರುವಲ್ಲಿಗೆ ಹೋಗಿ ಅವರ ಮನವಿಯನ್ನ ಕೇಳಬೇಕಿತ್ತು ಎಂದು ಕಿಡಿಕಾರಿದ್ದಾರೆ.








