ಮಾಜಿ ಶಾಸಕ ಸುರೇಶ್ ಗೌಡ ಹತ್ಯೆಗೆ ಸಂಚು – ಹಾಲಿ ಶಾಸಕ ಗೌರಿಶಂಕರ್ ವಿರುದ್ಧ FIR ದಾಖಲು…
ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್ ಗೌಡ ಅವರನ್ನ ಕೊಲೆ ಮಾಡುಲು ಸುಪಾರಿ ಕೊಡಲಾಗಿದೆ ಎಂಬ ಆರೋಪದ ಮೇಲೆ ತುಮಕೂರು ಗ್ರಾಮಾಂತರದ ಹಾಲಿ ಜೆಡಿಎಸ್ ಶಾಸಕ ಡಿಸಿ ಗೌರಿಶಂಕರ್ ಸೇರಿದಂತೆ ಒಟ್ಟು ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. MLA ಗೌರಿಶಂಕರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಹಿರೇಹಳ್ಳಿ ಮಹೇಶ್, ಶಾಸಕ ಗೌರಿಶಂಕರ, ಅಟ್ಟಿಕಾ ಗೋಲ್ಡ್ ಕಂಪನಿಯ ಮಾಲೀಕ ಅಟ್ಟಿಕಾ ಬಾಬು ವಿರುದ್ಧ ಮಾಜಿ ಶಾಸಕ ಸುರೇಶ್ ಗೌಡ ದೂರು ದಾಖಲಿಸಿದ್ದಾರೆ.
ರೌಡಿಶೀಟರ್ ಸುಜಯ್ ಭಾರ್ಗವ್ಗೆ ಸುಮಾರು 5 ಕೋಟಿ ರೂ.ಗೆ ಸುಪಾರಿ ನೀಡಲಾಗಿದೆ. ಅದರ ವೆಚ್ಚವನ್ನು ತುಮಕೂರು ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಟ್ಟಿಕಾ ಗೋಲ್ಡ್ ಕಂಪನಿಯ ಮಾಲೀಕ ಅಟ್ಟಿಕಾ ಬಾಬು ಭರಿಸುವ ಪ್ಲಾನ್ ಮಾಡಿದ್ದಾರೆ ಎಂದು ದೂರಲಾಗಿದೆ. ಅಲ್ಲದೇ ಭಾರಿ ವಾಹನ ಹತ್ತಿಸಿ ಕೊಲೆ ಮಾಡಿ ಅಪಘಾತ ಎಂದು ಬಿಂಬಿಸುವ ಸಂಚು ರೂಪಿಸಿದ್ದಾರೆ ಎಂದು ಸುರೇಶ್ ಗೌಡ ದೂರಿದ್ದಾರೆ ಉಲ್ಲೇಖಿಸಿದ್ದಾರೆ.
Conspiracy to kill former MLA Suresh Gowda – FIR filed against sitting MLA Gauri Shankar…