ವ್ಯಕ್ತಿಯೊಬ್ಬ ದೆಹಲಿಯಲ್ಲಿ ಮಹಿಳೆಯ ಮೇಲೆ ವಾರಗಳ ಕಾಲ ನಿರಂತರವಾಗಿ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.
ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ನ ಮಹಿಳೆಯೊಬ್ಬರ ಮೇಲೆ ದೆಹಲಿಯಲ್ಲಿ ಅವರ ಸ್ನೇಹಿತ ನಿರಂತರ ಅತ್ಯಾಚಾರ ನಡೆಸಿದ್ದಾನೆ. ಪರಾಸ್ (28) ಆರೋಪಿ ಎನ್ನಲಾಗಿದೆ. ಅಲ್ಲದೇ, ಮಹಿಳೆಯ ಮೇಲೆ ಬಿಸಿ ಆಹಾರ ಪದಾರ್ಥ ಎಸೆದು ವಿಕೃತಿ ಮೆರೆದಿದ್ದಾನೆ ಎನ್ನಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.
ಈ ಮಹಿಳೆಯು ದಕ್ಷಿಣ ದೆಹಲಿಯ ನೆಬ್ ಸರೈ ಪ್ರದೇಶದ ರಾಜು ಪಾರ್ಕ್ ನಲ್ಲಿ ತಿಂಗಳ ಕಾಲ ಪರಾಸ್ನೊಂದಿಗೆ ಬಾಡಿಗೆಯಲ್ಲಿ ವಾಸಿಸುತ್ತಿದ್ದಳು. ಆತನ ಕಿರುಕುಳ ಹೆಚ್ಚಾಗುತ್ತಿದ್ದಂತೆ ಮಹಿಳೆ ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮಹಿಳೆಯನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.